ಏ. 5 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ
Guru Vandana program at Government First Grade College on April 5th
ಬೈಲಹೊಂಗಲ 02: ತಾಲೂಕಿನ ನೇಸರಗಿ ಗ್ರಾಮದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ 1999-2002 ನೇ ಸಾಲಿನ ಬಿ. ಎ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿ- ವಿದ್ಯಾರ್ಥಿನೀಯರಿಂದ ಗುರುವಂದನೆ ಹಾಗೂ ಸ್ನೇಹಿತರ ಪುನರ್ ಮಿಲನ ಸಮಾರಂಭ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಎಫ್.ಡಿ. ಗದ್ದಿಗೌಡರ ವಿರಚಿತ ’ಗುರು ನೀನು ಶಿಷ್ಯ ನಾನು ’ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ದಿ. 5-4-2026 ರಂದು ಮುಂಜಾನೆ 9 ಘಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನೆರವೇರಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಚನ್ನಮ್ಮನ ಕಿತ್ತೂರು ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಾಬಾ ಸಾಹೇಬ ಪಾಟೀಲ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಫ್ .ಡಿ. ಗದ್ದಿಗೌಡರ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ನಿವೃತ್ತ ಜಂಟಿ ನಿರ್ದೇಶಕರಾದ ವಿ .ಎಸ್. ಪ್ರಕಾಶ, ಅಥಿತಿಗಳಾಗಿ ನಿವೃತ್ತ ಪ್ರಾಚಾರ್ಯ, ಜನಪ್ರೀಯ ಸಾಹಿತಿಗಳಾದ ಡಾ. ವಾಯ್ .ಎಮ್. ಯಾಕೊಳ್ಳಿ, ಕಾಲೇಜು ಸುಧಾರಣೆ ಸಮಿತಿ ಉಪಾಧ್ಯಕ್ಷರಾದ ಅಡಿವೆಪ್ಪ ಮಾಳಣ್ಣವರ, ಕಾಲೇಜು ಸುಧಾರಣೆ ಸಮಿತಿಯ ಸದಸ್ಯರು,1999-2002 ರಲ್ಲಿ ಶಿಕ್ಷಣ ಕಲಿಸಿದ ಉಪನ್ಯಾಸಕರು, ಸದ್ಯದ ಉಪನ್ಯಾಸಕರು, ಭೋಧಕ ಭೋಧಕೇತರ ಸಿಬ್ಬಂದಿ,1999-2002 ರಲ್ಲಿ ಬಿ.ಎ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆಂದು ಪ್ರಾಚಾರ್ಯ ಡಾ.ಎಫ್.ಡಿ.ಗಡ್ಡಿಗೌಡರ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 