ಗುರುಮಠಕಲ್: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್
ಗುರುಮಠಕಲ್: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್
ಯಾದಗಿರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ಮಭೂಮಿ ಗುರುಮಠಕಲ್ ನಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಅನುಮತಿ ನೀಡಿದೆ. ಗುರುಮಠಕಲ್ ನಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಅ. 31 ರಂದು ಗುರುಮಠಕಲ್ ಪಟ್ಟಣದಲ್ಲಿಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಿದ್ದು, ಇದೀಗ ಖರ್ಗೆ ಕೋಟೆಯಲ್ಲಿ ಆರ್‌ಎಸ್‌ಎಸ್ ಗಣವೇಷಧಾರಿಗಳು ಪಥಸಂಚಲನ ಮಾಡಲು ಕಾತುರರಾಗಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ರಿಂದ ಗುರುಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಓಟ್ ನಿಂದ ಪಥಸಂಚಲನ ಅನುಮತಿ ನೀಡಲಾಗಿದೆ. ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ, ಹನುಮಾನ್ ದೇವಸ್ಥಾನ, ಕುಂಬಾರವಾಡಿ ಸೇರಿ ಹಲವೆಡೆ ಪಥಸಂಚಲನ ಸಂಚರಿಸಲಿದೆ.
ಜಿಲ್ಲಾಡಳಿತವು ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹತ್ತು ಷರತ್ತು ವಿಧಿಸಿದೆ. ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು, ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ ಅನುಮತಿ ನೀಡಲಾಗಿದೆ.