ಸಮಾಜದಲ್ಲಿ ಗುರುಗಳಿಗೆ ಅತ್ಯುನ್ನತವಾದ ಸ್ಥಾನವಿದೆ: ಅರುಣ್ ಕುಮಾರ್
ರಾಣೆಬೆನ್ನೂರು 06: ಗುರು ಸ್ಥಾನದಲ್ಲಿರುವ ಶಿಕ್ಷಕರಿಗೆ, ಸಮಾಜದಲ್ಲಿ ಸದಾಕಾಲ ಮಾನ ಮನ್ನಣೆ ಗೌರವ ಇದೆ ಎಂದು ಶಾಸಕ ಅರುಣ್ ಕುಮಾರ್ ಪೂಜಾರ್ ಹೇಳಿದರು. ಅವರು ಸೋಮವಾರ.ಇಲ್ಲಿನ ಮೃತ್ಯುಂಜಯ ಸಭಾಭವನದಲ್ಲಿ ಜಿಪಂ ತಾಪಂ, ಶಾಲಾ ಶಿಕ್ಷಣ ಇಲಾಖೆ, ಚಿತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಸಂಪನ್ಮೂಲ ಕೇಂದ್ರ ಸಂಯುಕ್ತವಾಗಿ ಆಯೋಜಿಸಿದ್ದ, ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಸದಾ ಗೌರವಕ್ಕೆ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗುವ ಶಿಕ್ಷಕ ಸಮುದಾಯ, ಅಂದಿಗೂ ಇಂದಿಗೂ ಎಂದೆಂದಿಗೂ ಸದಾಕಾಲ ಗೌರವಕ್ಕೆ ಪಾತ್ರರಾಗುತ್ತಾರೆ ಎಂದ ಅವರು, ಸರ್ವಪಲ್ಲಿ ರಾಧಾಕೃಷ್ಣನ್ ರವರ ಶಿಕ್ಷಣ ಪ್ರೇಮವನ್ನು ಅರ್ಥಮಾಡಿಕೊಂಡು, ಇಂದಿನ ಯುವ ಶಿಕ್ಷಕರು ತಮ್ಮ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡು ಸಾಗಬೇಕಾದ ಅಗತ್ಯವಿದೆ ಎಂದರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ, ಜಿಪಂ ಮಾಜಿ ಸದಸ್ಯ ಮಂಗಳ ಗೌರಿ ಪೂಜಾರ್, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್ ನರಸಗೊಂಡರ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ತಿಳುವಳ್ಳಿ, ಮಲ್ಲಣ್ಣ ಅಂಗಡಿ, ಪ್ರಕಾಶ್ ಪೂಜಾರ, ಬಸವರಾಜ ಹುಲ್ಲತ್ತಿ, ಎಂ ಡಿ. ದ್ಯಾಮಣ್ಣವರ, ಸೇರಿದಂತೆ ಮತ್ತಿತರ ಗಣ್ಯರು ಮಾತನಾಡಿದರು ನಿವೃತ್ತ ಪ್ರಾಧ್ಯಾಪಕ ಪ್ರೊ : ಬಿ.ಬಿ.ನಂದ್ಯಾಲ್ ಅವರು ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಲಾವಿದೆ ಅನುಸೂಯ ರಾಥೋಡ್ ಸಂಗಡಿಗರು ಪ್ರಾರ್ಥಿಸಿದರು. ಸಿ. ಆರ್. ಪಿ, ಮಂಜ್ಯಾ ನಾಯಕ ಸ್ವಾಗತಿಸಿದರು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎಚ್ ಪಾಟೀಲ್, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ ಆರ್. ಪಿ ಗಂಗಪ್ಪ ನಾಯಕ್ ಮತ್ತು ಎನ್. ಕೆ. ಹೇಮಂತ್ ನಿರೂಪಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಲಿಂಗರಾಜ ಸುತ್ತಕೋಟಿ ವಂದಿಸಿದರು.