ಸರಳವಾಗಿ ಜಯಂತಿ ಆಚರಣೆಗೆ ಹೆಚ್.ವಿಶ್ವನಾಥ್ ಸೂಚನೆ
ಹೊಸಪೇಟೆ 03: ಹೊಸಪೇಟೆ ತಾಲೂಕು ಕಚೇರಿಯ ವತಿಯಿಂದ ಏ. 05ರಂದು ಬಾಬು ಜಗಜೀವನ್ ರಾಮ್ ಅವರ ಜಯಂತಿ ಹಾಗೂ ಏ. 14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಗಳನ್ನು ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ತಾಲ್ಲೂಕು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಹೆಚ್.ವಿಶ್ವನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು, ಎಲ್ಲಾರು ತಪ್ಪದೇ ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಸೂಚಿಸಿದ್ದಾರೆ.