ರೈತರು ಹಾಗೂ ಕೈಗಾರಿಕೆಗಳಿಗೆ ಸಮರ್ಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ಮುತ್ತಿಗೆ
ಲೋಕದರ್ಶನ ವರದಿ
ಯರಗಟ್ಟಿ 22: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಾಗೂ ಕೈಗಾರಿಕಾ ಉದ್ಯಮಗಳಿಗೆ ಸಮರ್ಕ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ರೈತರು ಹಾಗೂ ಕೈಗಾರಿಕಾ ಉದ್ಯಮಿಗಳು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಮಯದಲ್ಲಿ ಸಮರ್ಕ ವಿದ್ಯುತ್ ಪೂರೈಕೆಯಾಗದ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪದೇಪದೇ ವಿದ್ಯುತ್ ಕಡಿತಗೊಳ್ಳುತ್ತಿರುವುದರಿಂದ ಬೆಳೆಗಳಿಗೆ ಸಕಾಲದಲ್ಲಿ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆಗಳು ಹಾನಿಗೊಳಗಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅದೇ ರೀತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನಿರಂತರ ವಿದ್ಯುತ್ ಪೂರೈಕೆಯಾಗದ ಪರಿಣಾಮ ಉತ್ಪಾದನಾ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ. ವಿದ್ಯುತ್ ವ್ಯತ್ಯಯದಿಂದ ಉದ್ಯಮಿಗಳು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೆಸ್ಕಾಂ ಎಇಇ ಮಹೇಂದ್ರ ವಿಶಾಪೂರಕರ ಮಾತನಾಡಿ, ಪಟ್ಟಣದ ಮತ್ತು ಸುತ್ತಮುತ್ತಲಿನ ವಿದ್ಯುತ್ ಗ್ರಿಡ್‌ಗಳಿಂದ ರೈತರ ಜಮೀನುಗಳಿ ವಿದ್ಯುತ್ ಸರಬರಾಜು ಇದೆ. ಎರಡು ವಿದ್ಯುತ್ ಕೇಂದ್ರಗಳ ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯ ರೈತರಿಗೆ ಶಾಶ್ವತ ಪರಿಹಾರಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದ್ದೆನೆ’ ಎಂದು