ಎಚ್.ಪಿ.ವಿ. ಲಸಿಕೆ ಅತ್ಯಂತ ಸುರಕ್ಷಿತ : ವೈದ್ಯಾಧಿಕಾರಿ ಡಾ. ಸಂತೋಷ್
HPV vaccine is very safe: Medical Officer Dr. Santosh
ವಿಜಯಪುರ 16 : ದೇಶಾದ್ಯಂತ ನಡೆಯುತ್ತಿರುವ ಎಚ್.ಪಿ.ವಿ. ಲಸಿಕಾ ಅಭಿಯಾನದಲ್ಲಿ ಮುಖ್ಯವಾಗಿ 14 ವರ್ಷದ ಹೆಣ್ಣು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಾಗತಿಕ ಲಸಿಕಾ ಸುರಕ್ಷತಾ ಮೇಲ್ವಿಚಾರಣೆಯಲ್ಲಿ ಈ ಲಸಿಕೆ ಅತ್ಯಂತ ಸುರಕ್ಷಿತ ಎಂಬುದು ಖಚಿತಪಡಿಸಿದೆ ಎಂದು ವೈದ್ಯಾಧಿಕಾರಿ ಡಾ / ಸಂತೋಷ್ ತಿಳಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಶಿವಣಗಿ ಯಲ್ಲಿ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್ ) ಲಸಿಕೆಯನ್ನು ಬಿಡುಗಡೆ ಗೊಳಿಸಿ ಮಾತನಾಡಿದವರು, ಈ ಲಸಿಕೆ ಹಾಕಿಸಿಕೊಳ್ಳುವುದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಯಲು ಪ್ರಮುಖ ಕಾರಣ ವಾಗುತ್ತದೆ, ಕಳೆದ 15 ವರ್ಷಗಳಿಂದ ಅಂಕಿ ಅಂಶಗಳು ಎಚ್‌ಪಿವಿ, ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸಾಬೀತುಪಡಿಸಿದೆ.
ಲಸಿಕೆಯಿಂದ ಅಡ್ಡ ಪರಿಣಾಮಗಳು ಕಂಡುಬಂದರೂ, ಅವು ಇತರ ಲಸಿಕೆಗಳಂತೆ ಸಾಮಾನ್ಯ / ಸಾಧಾರಣ ಮತ್ತು ತಾತ್ಕಾಲಿಕವಾಗಿರುತ್ತದೆ ಎಂದು ತಿಳಿಸಿದರು. ಲಸಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷರಾದ ಶಾಂತಾಬಾಯಿ ಭರತ್ ನೂರ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಶಿವಪದ್ಮ ಕೂಟನೂರ್, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಎಂ ಎಸ್ ಗುಬಚಿ, ಕೆ ಎಸ್ ಮೇಲಿನಮಠ, ಅರ್ಜುನ್ ಕಗ್ಗೋಡ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ತ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 