ಹೂವಿನ ಹಡಗಲಿ

ಹಡಗಲಿ: ಗುರುಭವನ ಕಟ್ಟಡಕ್ಕೆ ಶಾಸಕರಿಂದ ಭೂಮಿ ಪೂಜೆ

ಹಡಗಲಿ: ಗುರುಭವನ ಕಟ್ಟಡಕ್ಕೆ ಶಾಸಕರಿಂದ ಭೂಮಿ ಪೂಜೆ

ಹೂವಿನ ಹಡಗಲಿ 05: ನೂತನ ಗುರುಭವನ ನಿರ್ಮಾಣಕ್ಕೆ ಶಾಸಕರಾದ ಎಲ್ ಕೃಷ್ಣನಾಯ್ಕ್‌ ಶಿಕ್ಷಕರ ದಿನಾಚರಣೆಯಂದು ಭೂಮಿ ಪೂಜೆ ನೆರವೇರಿಸಿದರು. ಪಟ್ಟಣದ ಬೈ ಪಾಸ್ ರಸ್ತೆಯಲ್ಲಿನ ಹಳೇ ಗುರುಭವನ ಇದ್ದ ಸ್ಥಳದಲ್ಲೇ ನೂತನ ಗುರುಭವನ ನಿರ್ಮಾಣಕ್ಕೆ ಚಾಲನೆ ನೀಡಿದರು. ಶಾಸಕರ ಅನುದಾನ ಹಾಗೂ ಇತರೆ ಅನುದಾನ ಬಳಸಿ ಶೀಘ್ರದಲ್ಲೇ ಗುರುಭವನ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೇಳಿದರು.  

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ದೈಹಿಕ ಅಧೀಕ್ಷಕ ರಫೀಕ್ ಅಹಮದ್ ಖವಾಸ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯು ಆನಂದ್ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎ ಕೊಟ್ರಗೌಡ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ, ರಾಜ್ಯ ಸಹ ಕಾರ್ಯದರ್ಶಿ ಶಿವಕುಮಾರ್ ಗಡ್ಡಿ, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ