ವೈಚಾರಿಕ ಶರಣ ಹಡಪದ ಅಪ್ಪಣ್ಣ: ಅಬೀದ್ ಗದ್ಯಾಳ
ಇಂಡಿ 21: ಇಂಡಿ ತಾಲೂಕಿನ ಎಲ್ಲಡೆ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅದರಂತೆ ಇಂಡಿ ನಗರದ ಹೃದಯ ಭಾಗದಲ್ಲಿರುವ ಮಿನಿ ವಿಧಾನಸೌಧ ಕಾರ್ಯದಲ್ಲಿ ಕೂಡಾ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ನೀಜ ಶರಣ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು.
ಇವರು ಹಡಪದ ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ್ರ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು. ಅಂದು ಹಡಪದ ಸಮಾಜದವರು ಬೆಳಿಗ್ಗೆ ಎದರುಗಡೆ ಬಂದರೆ ಏನೋ ಆಗುತ್ತದೆ ಎಂಬ ಮೂಢ ನಂಬಿಕೆಯನ್ನು ಹೋಗಲಾಡಿಸುವುದಕ್ಕಾಗಿಯೆ ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ. ಇವರ ಧರ್ಮಪತ್ನಿ ಲಿಂಗಮ್ಮನವರೂ ಸಹ ಮಹಾನ್ ವಚನಗಾರ್ತಿಯಾಗಿದ್ದರು. ಇವರ ಊರು ವಿಜಯಪುರ ಜಿಲ್ಲೆಯ ತಂಗಡಗಿಯಾಗಿರುತ್ತದೆ ಅಲ್ಲಿಯೆ ಇವರ ಸಮಾಧಿಯೂ ಸಹ ಇದೆ. ಇವರು ಸುಮಾರು 250ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ.ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಧನಪಾಲ್ ಶೆಟ್ಟಿ ದಾವೂರ, ಕಂದಾಯ ನೀರೀಕ್ಷಕ ಎಸ್ ಎಚ್ ಗುನ್ನಾಪೂರ ಹಾಗೂ ಪ್ರಕಾಶ್ ಚವಡಿಹಾಳ, ಎಸ್. ಈ. ನಾರಾಣಪೂರ, ಎಮ್. ಕೆ. ಮೊಕಟೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.