ಹಡಪದ ಅಪ್ಪಣ್ಣರ ತತ್ವಗಳು ಇಂದಿಗೂ ಪ್ರಸ್ತುತ: ಪ್ರೊ. ಎಚ್.ಟಿ. ಪೋತೆ
Hadapada Appanna's principles remain relevant even today: Prof. H.T. Pothe
ಲೋಕದರ್ಶನ ವರದಿ
ಕಲಬುರಗಿ 29: 12ನೇ ಶತಮಾನದ ವಚನ ಚಳವಳಿ ಹಾಗೂ ಸಮಾನತೆಯ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಪಾತ್ರ ಮಹತ್ವದ್ದಾಗಿದ್ದು, ಅವರ ಕಾಯಕ ತತ್ವ ಹಾಗೂ ಸಾಮಾಜಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಶ್ರೀ ಶರಣ ಹಡಪದ ಅಪ್ಪಣ್ಣ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಹಡಪದ ಅಪ್ಪಣ್ಣರನ್ನು ಅನುಭವ ಮಂಟಪದಲ್ಲಿ ಸಮಾನ ಸ್ಥಾನ ನೀಡಿ ಆಪ್ತ ಸಹಾಯಕನಾಗಿ ಗೌರವಿಸಿದ್ದನ್ನು ಸ್ಮರಿಸಿದರು. ಕಾಯಕ, ಸೇವೆ ಹಾಗೂ ಸಮಾನತೆಯ ತತ್ವಗಳನ್ನು ಸಮಾಜ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಕೇರಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಜೀವನ ಮೌಲ್ಯಗಳ ರೂಪುಗೊಳ್ಳುವಿಕೆಗೆ ಹಡಪದ ಅಪ್ಪಣ್ಣರ ಸಂದೇಶಗಳು ಪ್ರೇರಣೆಯಾಗುತ್ತವೆ ಎಂದರು.
ಅಧ್ಯಯನ ಪೀಠದ ನಿರ್ದೇಶಕ ಡಾ. ಸುರೇಶ್ ಜಂಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಹಡಪದ ಅಪ್ಪಣ್ಣರ ವಚನಗಳ ಕುರಿತು ಈಗಾಗಲೇ ಮೂರು ಕೃತಿಗಳನ್ನು ಪ್ರಕಟಿಸಲಾಗಿದ್ದು, ವಚನಗಳನ್ನು ಇನ್ನಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ರಮೇಶ್ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ಎನ್.ಜಿ. ಕಣ್ಣೂರು, ವಿತ್ತಾಧಿಕಾರಿ ಶ್ರೀಮತಿ ಜಯಾಂಬಿಕಾ, ಡಾ. ಸೂರ್ಯಕಾಂತ್ ಸುಜಾತ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 