ಹಡಪದ ಅಪ್ಪಣ್ಣ ಜಯಂತಿ: ಅದ್ಧೂರಿ ಭಾವಚಿತ್ರ ಮೆರವಣಿಗೆ

ಹಡಪದ ಅಪ್ಪಣ್ಣ ಜಯಂತಿ: ಅದ್ಧೂರಿ ಭಾವಚಿತ್ರ ಮೆರವಣಿಗೆ   Hadapada Appanna Jayanti: Grand portrait procession

ಲೋಕದರ್ಶನ ವರದಿ 

ಗದಗ, 11: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ವಿವಿಧ ಇಲಾಖೆಗಳು ಹಾಗೂ ತಾಲ್ಲೂಕು ಹಡಪದ ಸಮಾಜದ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ 892ನೇ ಜಯಂತ್ಯೋತ್ಸವದ ಅಂಗವಾಗಿ ಭಾವಚಿತ್ರ ಮೆರವಣಿಗೆ ನಡೆಯಿತು.  ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಹಡಪದ ಸಮಾಜದ ತಾಲ್ಲೂಕು ಅಧ್ಯಕ್ಷ ಮಂಜುನಾಥ ಕೌರವದ, ಗೌರವಾಧ್ಯಕ್ಷ ಗುರುಪಾದಪ್ಪ ಹಡಪದ, ರಾಜ್ಯ ಸಮಿತಿ ಸದಸ್ಯ ಮಲ್ಲಿಕಾರ್ಜುನ ಹಡಪದ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.