ಗುರುಕುಲ ಸೇವಾ ರತ್ನ ಪ್ರಶಸ್ತಿಗೆ ಹಡಪದ ದಂಪತಿ

ಗುರುಕುಲ ಸೇವಾ ರತ್ನ ಪ್ರಶಸ್ತಿಗೆ ಹಡಪದ ದಂಪತಿ  Hadapada couple selected for Gurukula Seva Ratna Award


ಲಕ್ಷ್ಮೇಶ್ವರ, ಸೆ.16: ಪಟ್ಟಣದ ಡಾ. ಬಿ.ಆರ್‌. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಾರ್ಡನ್ ಬಿ.ಎಸ್‌. ಹಡಪದ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ, ಒಡೆಯರ ಮಲ್ಲಾಪುರದ ನರ್ಸಿಂಗ್ ಅಧಿಕಾರಿ ಅವರ ಧರ್ಮಪತ್ನಿ ಚಂದ್ರಮತಿ ಶಿವಪ್ಪ ನಾವಿ ಅವರಿಗೆ 2026ನೇ ಸಾಲಿನ ‘ಗುರುಕುಲ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.  

ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನದ ಅಂಗವಾಗಿ ಗದಗದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.  

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ವಸತಿ ಶಾಲೆಗಳ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಶಸ್ತಿ ನೀಡಲಾಗಿದೆ.  

ಕಾರ್ಯಕ್ರಮದಲ್ಲಿ ಬಸವರಾಜ ಹೊರಟ್ಟಿ, ಎಸ್‌.ವಿ. ಸಂಕನೂರ ಸೇರಿದಂತೆ ಗಣ್ಯರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.