ಹಡಪದ ಅಪ್ಪಣ್ಣ ಜಯಂತಿ
ಮುಂಡಗೋಡ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಶನಿವಾರ ಇಲ್ಲಿಯ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಆಚರಿಸಲಾಯಿತು.
ತಹಸೀಲ್ದಾರ ಶ್ರೀಧರ ಮುಂದಲಮನಿ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಮಾತನಾಡಿ, ಕೋವಿಡ್ ನಿಂದಾಗಿ ಮಹಾನಾಯಕರ ಜಯಂತಿಗಳನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸುವುದು ಅನಿವಾರ್ಯವಾಗಿದ್ದು, ಕೋವಿಡ್ ಬಯವನ್ನು ಹೋಗಲಾಡಿಸಿ ಮೊದಲಿನಂತೆ ನೆಮ್ಮದಿಯ ಜೀವನ ಮರಳಬೇಕಾದರೆ ಪ್ರತಿಯೊಬ್ಬರು ಜಾಗೃತೆವಹಿಸಿ ಸುರಕ್ಷತೆ ಕಾಯ್ದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ ಜಿ.ಬಿ ಭಟ್, ಹಿಂದು ಮಹಾ ಸಭಾ ರಾಜ್ಯ ಉಪಾಧ್ಯಕ್ಷ ಬಸವರಾಜ ಹಡಪದ, ಶಿವಶರಣ ಹಡಪದ ಅಪ್ಪಣ್ಣ (ಕ್ಷೌರಿಕ) ಪುರುಷರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಂಜುನಾಥ, ಹಡಪದ, ಕಾರ್ಯದರ್ಶಿ ಮಹೇಶ ಹಡಪದ ಮುಂತಾದವರು ಉಪಸ್ಥಿತರಿದ್ದರು.