ವಿಜಯಪುರ

ಕರಕುಶಲ ಕಲಾ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ

ಕರಕುಶಲ ಕಲಾ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ

ಕರಕುಶಲ ಕಲಾ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ  

ಆಳಮಟ್ಟಿ 04 : ಆರಿ​‍್ಬ. ಪಿ.ಜಿ. ಹಳ್ಳಕಟ್ಟಿ ಪ್ರೌಢಶಾಲೆಯಲ್ಲಿ ಕರಕುಶಲ ಕಲೆಗಳ ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಧಾರವಾಡ ಜವಳಿ ಸಚಿವಾಲಯದ ಕರಕುಶಲ ವಿಭಾಗದ ಸಹಾಯಕ ನಿರ್ದೇಶಕ ಕಿರಣ್ ವಿ.ಎನ್‌. ಅವರನ್ನು ಶಾಲೆಯ ಪರವಾಗಿ ಮುಖ್ಯೋಪಾಧ್ಯಾಯ ಜಿ.ಎಂ. ಕೋಟ್ಯಾಳ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕರಕುಶಲ ವಿಭಾಗದ ವತಿಯಿಂದ ಶಾಲೆಯ ಮುಖ್ಯಸ್ಥರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಜಿ.ಎಂ. ಕೋಟ್ಯಾಳ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. 


ಸುದ್ದಿ ಓದಿ