ಬಳ್ಳಾರಿ

ಕೆಳ ಸೇತುವೆ ನಿರ್ಮಾಣಕ್ಕೆ ರೈಲ್ವೇ ಇಲಾಖೆಗೆ ರೂ.8.84 ಕೋಟಿ ಡಿಡಿ ಹಸ್ತಾಂತರ

ಕೆಳ ಸೇತುವೆ ನಿರ್ಮಾಣಕ್ಕೆ ರೈಲ್ವೇ ಇಲಾಖೆಗೆ ರೂ.8.84 ಕೋಟಿ ಡಿಡಿ ಹಸ್ತಾಂತರ

ಬಳ್ಳಾರಿ,ನ.17: ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೂ.8.84 ಕೋಟಿ ಮೊತ್ತದ ಡಿಡಿ ಯನ್ನು ರೈಲ್ವೇ ಇಲಾಖೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಹಸ್ತಾಂತರಿಸಲಾಯಿತು. 

ಈ ಸಂದರ್ಭದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ, ಎಡಿಸಿ ಮಂಜುನಾಥ, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತ ರುದ್ರೇಶ್, ಬುಡಾ ಆಧ್ಯಕ್ಷರಾದ ಮಾರುತಿ ಪ್ರಸಾದ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇತರರು ಇದ್ದರು. 


ಸುದ್ದಿ ಓದಿ