ಮುಂಡಗೋಡ ಆಸ್ಪತ್ರೆಗೆ ಸುಸಜ್ಜಿತ ಅಂಬುಲೆನ್ಸ್ ಹಸ್ತಾಂತರ
ಲೋಕದರ್ಶನ ವರದಿ
ಮುಂಡಗೋಡ 10: ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಮಹತ್ವದ ಕಾರ್ಯಕ್ರಮ ನಡೆಯಿತು. ಶಾಸಕರಾದ ಶಿವರಾಮ ಹೆಬ್ಬಾರ್ ಅವರು “ನ್ಯೂಕ್ಲಿಯರ್ ಪವರ್ ಕಾರ್ೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಕೈಗಾ)” ಸಂಸ್ಥೆಯ ಸಿ.ಎಸ್.ಆರ್ ಅನುದಾನದಡಿ ಒದಗಿಸಲಾದ ಅಂಬ್ಯುಲೇನ್ಸ್ ಅನ್ನು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನತೆಗೆ ತುರ್ತು ವೈದ್ಯಕೀಯ ಸೇವೆಗಳು ಸುಲಭವಾಗಿ ದೊರಕುವಂತೆ ಮಾಡುವಲ್ಲಿ ಈ ಅಂಬ್ಯುಲೇನ್ಸ್ ಸಹಾಯಕವಾಗಲಿದೆ ಎಂದು ತಿಳಿಸಿದರು. ಆರೋಗ್ಯ ಸೇವೆಗಳ ಬಲವರ್ಧನೆಗೆ ಇಂತಹ ಸೌಲಭ್ಯಗಳು ಅಗತ್ಯವಾಗಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ನ್ಯೂಕ್ಲಿಯರ್ ಪವರ್ ಕಾರ್ೊರೇಷನ್ ಆಫ್ ಇಂಡಿಯಾ ಲಿಮಿಟೆಡ್ನ ಅಧಿಕಾರಿಗಳು, ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.