ಪ್ರೇಮಿಗಳ ದಿನಾಚರಣೆಗೆ 'ಸಾಗುತ ದೂರದೂರ'
ಬೆಂಗಳೂರು, ಜ 30, ದಿವ್ಯ ಪೂಜಾರಿ ಅರ್ಪಿಸುವ, ಖುಷಿ ಕನಸು ಕ್ರಿಯೇಷನ್ಸ್ ಲಾಂಛನದಲ್ಲಿ ಅಮಿತ್ ಪೂಜಾರಿ ಅವರು ನಿರ್ಮಿಸಿರುವ ‘ಸಾಗುತ ದೂರದೂರ‘ ಚಿತ್ರ ಫ಼ೆಬ್ರವರಿ ೧೪ರ ಪ್ರೇಮಿಗಳ ದಿನಾಚರಣೆಗೆ ತೆರೆಗೆ ಬರಲಿದೆಅನಿಲ್ ಪೂಜಾರಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದು, ರವಿತೇಜ ಆಕ್ಷನ್ ಕಟ್ ಹೇಳಿದ್ದಾರೆ ಕದ್ರಿ ಮಣಿಕಾಂತ್ ಅವರ ಸಂಗೀತ ನಿರ್ದೇಶನವಿದ್ದು, ಸತೀಶ್ ಬಾಬು, ಡಾ ವಿ ನಾಗೇಂದ್ರಪ್ರಸಾದ್, ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಅಭಿಲಾಶ್ ಕಲಾತಿ ಅವರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಖ್ಯಾತ ನಿರ್ದೇಶಕ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪವನ್ ಒಡೆಯರ್, ಮಹೇಶ್ ಸಿದ್ದು, ಆಶಿಕ್ ಆರ್ಯ, ಕುಮಾರ್ ನವೀನ್, ಗಡ್ದಪ್ಪ, ಸೂರಜ್, ಉಷಾ ಭಂಡಾರಿ, ಮೋಹನ್ ಜುನೇಜ, ಹೊನ್ನವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 