ದ್ವೇಷ ಭಾಷಣ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ
Hate Speech Bill passed in the Assembly
ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲದ ನಡುವೆಯೇ 'ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ಮಸೂದೆ-2025'ಕ್ಕೆ ಸರ್ಕಾರವು ಅಂಗೀಕಾರ ಪಡೆಯಿತು.
ಕಳೆದ ಬುಧವಾರ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ಇಂದು ಮಸೂದೆಯನ್ನು ಅಂಗೀಕರಿಸಲಾಗಿದೆ.
ದ್ವೇಷ ಭಾಷಣ ತಡೆಯುವ ದೇಶದ ಮೊದಲ ಕಾನೂನು ಇದಾಗಿದ್ದು, ಈ ಮಸೂದೆಯು ಒಂದು ಲಕ್ಷ ರೂ.ಗಳವರೆಗೆ ದಂಡ ಮತ್ತು ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶ ನೀಡುತ್ತದೆ. ಈ ಮಸೂದೆಯನ್ನು ಡಿಸೆಂಬರ್ 4 ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿತ್ತು.
ಮಸೂದೆಗೆ ವಿರೋಧ ವ್ಯಕ್ತಪಡಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡುತ್ತಿದ್ದಾಗ ಮಧ್ಯಪ್ರವೇಶಿಸಿದ ಸಚಿವ ಬೈರತಿ ಸುರೇಶ್, 'ಕರಾವಳಿಗೆ ಬೆಂಕಿ ಹಚ್ಚಿದ್ದೀರ. ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರ' ಎಂದು ಬಿಜೆಪಿ ಸದಸ್ಯರನ್ನು ಉದ್ದೇಶಿಸಿ ನೀಡಿದ ಹೇಳಿಕೆಯು ಗದ್ದಲಕ್ಕೆ ಕಾರಣವಾಯಿತು.
ಕರಾವಳಿ ಭಾಗದಿಂದ ಆರಿಸಿ ಬಂದ ಬಿಜೆಪಿ ಎಲ್ಲ ಸದಸ್ಯರು ಬೈರತಿ ಸುರೇಶ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಅವರು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ಗದ್ದಲ ಉಂಟಾಗಿ ಕೋಲಾಹಲವೇ ಸೃಷ್ಟಿಯಾಯಿತು.
ಸಚಿವ ಬೈರತಿ ಸುರೇಶ್ ಹೇಳಿದ ಮಾತನ್ನು ಕಡತದಿಂದ ವಾಪಸ್ ತೆಗೆಯುತ್ತೇನೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬಿಜೆಪಿ ಸದಸ್ಯರನ್ನು ಮನವೊಲಿಸಲು ಮುಂದಾದರು. ಆದರೆ, ತೀವ್ರ ಆಕ್ರೋಶಗೊಂಡ ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯಕ್, ಚನ್ನಬಸಪ್ಪ ಮುಂತಾದವರು ಸಭಾಧ್ಯಕ್ಷರ ಪೀಠದ ಮುಂದೆ ಬಂದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಅಶೋಕ ಅವರು ಮಸೂದೆಯ ಪ್ರತಿಯನ್ನು ಹರಿದು, ಎಸೆದರು.ಈ ಮಧ್ಯೆಯೇ ಸಚಿವ ಪರಮೇಶ್ವರ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 