ಹಾವೇರಿ: ನರೇಗಾ ಯೋಜನೆ ಸದ್ಬಳಕೆಗೆ ಗ್ರಾಮೀಣ ಜನರಲ್ಲಿ ಜಾಗೃತಿ ಮೂಡಿಸಿ: ರುದ್ರ್ಪ ಲಮಾಣಿ
Haveri: Create awareness among rural people about the effective use of the MGNREGA scheme: Rudrappa
ಲೋಕದರ್ಶನ ವರದಿ
ಹಾವೇರಿ 14: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಒದಗಿಸುವ ಮಹತ್ವದ ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರವು ಈಗ ವಿಕಸಿತ ಭಾರತ್ ಜಿ-ರಾಂ ಎಂಬ ಹೊಸ ಹೆಸರಿನಲ್ಲಿ ಮುಂದುವರಿಸುತ್ತಿದ್ದು, ಗ್ರಾಮೀಣ ಜನತೆ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರು ಹಾಗೂ ಶಾಸಕರಾದ ರುದ್ರ್ಪ ಲಮಾಣಿ ಹೇಳಿದರು. ತಾಲೂಕಿನ ಕಳಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ್ ಜಿ-ರಾಂ ಯೋಜನೆಯ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಕಾರ್ಮಿಕರು ಈ ಯೋಜನೆಯ ಮೂಲಕ ನಿರಂತರವಾಗಿ ಉದ್ಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು. ಯೋಜನೆಯ ಉದ್ದೇಶ ಹಾಗೂ ಸೌಲಭ್ಯಗಳ ಕುರಿತು ಹೆಚ್ಚಿನ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪರಮೇಶ ಎನ್. ಹುಬ್ಬಳ್ಳಿ ಮಾತನಾಡಿ, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಈಗಾಗಲೇ ಹಾವೇರಿ ತಾಲೂಕಿನ ಕಳಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ್ ಜಿ-ರಾಂ ಯೋಜನೆಯ ಜನಜಾಗೃತಿ ಜಾಥಾ ಹಾಗೂ ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ತಹಶೀಲ್ದಾರ ಶರಣಮ್ಮ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶ್ರೀಮಂತ ಹಡಗಲಿ, ತಾಲೂಕು ಪಂಚಾಯಿತಿ ಕೆಡಿಪಿ ಸಭೆಯ ಸದಸ್ಯ ಮಲ್ಲಿಕಾರ್ಜುನ ಬೂದಗಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾರದಾ ಜಾಲವಾದಿ, ಮಂಜುಳಾ ತಾರಿಕೊಪ್ಪ ಸೇರಿದಂತೆ ಗ್ರಾಮ ಮುಖಂಡರು, ನರೇಗಾ ಫಲಾನುಭವಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 