ಹಾವೇರಿ ಸರ್ಕಾರಿ ಕಾನೂನು ವಿದ್ಯಾಲಯ ಕಳಪೆ ಕಾಮಗಾರಿ, ಮಂದಗತಿಯಲ್ಲಿ ಕಟ್ಟಡ ನಿರ್ಮಾಣ: ಶಾಸಕರ, ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಖಂಡನೀಯ ಪ್ರಸಕ್ತ ವರ್ಷದಿಂದಲೇ ಕಾಲೇಜ್ ಪ್ರಾರಂಭಿಸಲು ಎಸ್‌ಎಫ್‌ಐ ಆಗ್ರಹ

ಹಾವೇರಿ ಸರ್ಕಾರಿ ಕಾನೂನು ವಿದ್ಯಾಲಯ ಕಳಪೆ ಕಾಮಗಾರಿ, ಮಂದಗತಿಯಲ್ಲಿ ಕಟ್ಟಡ ನಿರ್ಮಾಣ: ಶಾಸಕರ, ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಖಂಡನೀಯ  ಪ್ರಸಕ್ತ ವರ್ಷದಿಂದಲೇ ಕಾಲೇಜ್ ಪ್ರಾರಂಭಿಸಲು ಎಸ್‌ಎಫ್‌ಐ ಆಗ್ರಹ  Haveri Government Law College: Poor workmanship, slow construction: Negligence of MLAs and District

ಹಾವೇರಿ 28 : ಸರ್ಕಾರಿ ಕಾನೂನು ಮಹಾವಿದ್ಯಾಲಯ ಆಮೆಗತಿ ಕಟ್ಟಡ ನಿರ್ಮಾಣ, ಶಾಸಕರ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯ, ವಿಳಂಬ ಖಂಡಿಸಿ, ಕಳಪೆ ಕಾಮಗಾರಿ ಪರೀಶೀಲನೆ ನಡೆಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಎಸ್‌ಎಫ್‌ಐ ಕಚೇರಿ ಎದುರು ಭಿತ್ತಿಚಿತ್ರ ಪ್ರದರ್ಶನ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನೂರಾರು ವಿದ್ಯಾರ್ಥಿಗಳು ಇವತ್ತು ಪದವಿ ಮುಗಿಸಿ ಉನ್ನತ ಶಿಕ್ಷಣ ಪಡೆಯಬೇಕು ಅದರಲ್ಲೂ ವಕೀಲರಾಗಬೇಕೆಂದು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಹಾವೇರಿ ಜಿಲ್ಲೆಯ ರಚನೆಗೊಂಡು 27 ವರ್ಷ ಕಳೆದರು ಸರ್ಕಾರಿ ಕಾನೂನು ಕಾಲೇಜು ಇಲ್ಲದೆ ಬೇರೆ ಬೇರೆ ಜಿಲ್ಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುವಂತಾಗಿದೆ.

ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಖಾಸಗಿ ಕಾನೂನು ಕಾಲೇಜ್ ಇದ್ದು ಅದು ರಾಣೇಬೆನ್ನೂರ ನಲ್ಲಿರುವದರಿಂದ ಬೇರೆ ಬೇರೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸೀಟ್ ಸಿಗದಿರುವುದು ಹಾಗೂ ಸರ್ಕಾರಿ ಶುಲ್ಕ ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದರಿಂದ ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಪಡೆಯುವುದು ಅಸಾಧ್ಯವಾಗಿದೆ. ಅನಿವಾರ್ಯವಾಗಿ ದಾವಣಗೆರೆ, ಹುಬ್ಬಳ್ಳಿ ಧಾರವಾಡ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಮೊರೆ ಹೋಗುತ್ತಿದ್ದಾರೆ.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಎಸ್‌ಎಫ್‌ಐ ಆನೇಕ ವರ್ಷಗಳಿಂದ ಹಾವೇರಿ ಜಿಲ್ಲೆಗೊಂದು ಕಾನೂನು ಕಾಲೇಜು ಮಂಜೂರು ಮಾಡುವಂತೆ ಹೋರಾಟ ಮಾಡುತ್ತಾ ಬಂದಿದ ಹೋರಾಟದ ಪ್ರತಿಫಲವಾಗಿ ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಹಾಗಾಗಿ ಕಾನೂನು ಪದವಿ ಪಡೆಯ ಬಯಸುವ ನೂರಾರು ವಿದ್ಯಾರ್ಥಿಗಳು ಹಾವೇರಿಯಲ್ಲಿ ಸರ್ಕಾರಿ ಕಾಲೇಜ್ ಪ್ರಾರಂಭವಾಗಬಹುದು ಎಂದು ಎದುರು ನೋಡುತ್ತಾ ಕುಳಿತ್ತಿದ್ದಾರೆ. ನೆಲೊಗಲ್ ಗುಡ್ಡದಲ್ಲಿ ಕಟ್ಟಡ ಪ್ರಾರಂಭವಾಗಿದ್ದು, ಅಮೆಗತಿ ಸಾಗುತ್ತಿದೆ ವಿನಹ ತ್ವರಿತವಾಗಿ ನಿರ್ಮಾಣವಾಗುತ್ತಿಲ್ಲ.

ಕಾನೂನು ಕಾಲೇಜು ಪ್ರಾರಂಭಿಸುವ ಕುರಿತು ಯಾವುದೇ ರೀತಿಯ ಬೆಳವಣಿಗೆ ಕಂಡು ಬಂದಿರುವುದಿಲ್ಲ. ಆದರಿಂದ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ನಚಿವರು ಈತ ಗಮನಾರ್ಹಸಿ ಪ್ರಸಕ್ತ ವರ್ಷದಲ್ಲೇ ನಗರದ ಮುನ್ಸಿಪಲ್ ಮೈದಾನದ ಹತ್ತಿರದ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಕಾನೂನು ತರಗತಿಗಳನ್ನು ಪ್ರಾರಂಭಿಸುವಂತೆ ಎಸ್‌ಎಫ್‌ಐ ಆಗ್ರಹಿಸುತ್ತದೆ. ಖಾಸಗಿ ಕಾಲೇಜ್ ಗಳಿಗೆ ಅನುಮತಿ ನೀಡುವ ಸರ್ಕಾರ ತನ್ನದೇ ಸರ್ಕಾರಿ ವಿದ್ಯಾಲಯ ಪ್ರಾರಂಭಿಸಲು ಹಿಂದೇಟು ಹಾಕುವಂತೆ ಕಾಣಲು ಜಮಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ.

ಶೀಘ್ರವಾಗಿ ಕಟ್ಟಡ ನಿರ್ಮಾಣ ಮಾಡಿ, ಇಲ್ಲವೇ ಪರ್ಯಾಯವಾಗಿ ಬೇರೆ ಯಾವುದಾದರೂ ಒಂದು ಸರ್ಕಾರಿ ಕಾಲೇಜ್ ಗಳಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಂಡು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಬೇಕು. ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಸ್‌ಎಫ್‌ಐ ಜಿಲ್ಲಾ ಮುಖಂಡ ಅರುಣ್ ಕುಮಾರ್ ನಗವತ್, ಚೈತ್ರಾ ಕೊರವರ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣ ನಾಯ್ಕ್‌, ಧನುಷ್ ದೊಡ್ಡಮನಿ, ಪಂಚಾಕ್ಷರಿ ಎಮ್ ಕೋಡಿಹಾಳ, ಸಂದೀಪ್ ಜಿ ಹಳೆಮನೆ ಉಪಸ್ಥಿತರಿದ್ದರು.