ಹಾವೇರಿ ವಿಶ್ವವಿದ್ಯಾಲಯ ಪರೀಕ್ಷಾ ಏರಿಕೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Haveri University students protest against exam hike
ರಾಣೆಬೆನ್ನೂರು 17 : ಹಾವೇರಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ, ಏರಿಸಿ ಶುಲ್ಕ ಇಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಣೆಬೆನ್ನೂರು ತಾಲ್ಲೂಕ್ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆರ್ ಟಿ ಇ ಎಸ್ ಪ್ರಥಮ ದರ್ಜೆ ಕಾಲೇಜುಎದುರು ಪ್ರತಿಭಟನೆ ನಡೆಸಿ ಕಾಲೇಜಿನ ಪ್ರಾಂಶುಪಾಲರ ಮೂಲಕ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆ ಉದ್ದೇಶಿಸಿ ಎಸ್‌ಎಫ್‌ಐ ಮುಖಂಡ ಅರುಣ್ ಕುಮಾರ್ ನಗವತ್ ಮಾತನಾಡಿ, ಹಾವೇರಿ ವಿಶ್ವವಿದ್ಯಾಲಯವು 2025-26ರ ಸಾಲಿನಲ್ಲಿ ನಡೆಯುವ ಬಿ ಎ, ಬಿಕಾಂ, ಹಾಗೂ ಬಿಎಸ್ಸಿ ಪದವಿಯ ಎಲ್ಲಾ ಸೆಮಿಸ್ಟರ್ ಪರೀಕ್ಷೆಗಳ ಶುಲ್ಕವನ್ನು ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ, ಅಂಕಪಟ್ಟಿ ಶುಲ್ಕ, ಘಟಿಕೋತ್ಸವ ಅರ್ಜಿ ಸೇರಿದಂತೆ ವಿವಿಧ ಹೆಸರುಗಳಲ್ಲಿ 1095 ರೂಪಾಯಿಗಳು ಹಾಗೂ ವೃತಿಪರ ತರಬೇತಿ ಮೌಖಿಕ ಪರೀಕ್ಷೆ 550 ರೂಪಾಯಿಗಳನ್ನು ತೆಗೆದುಕೊಳ್ಳುವುದನ್ನು ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 