ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ನೇರ ಫೋನ್-ಇನ್ ಕಾರ್ಯಕ್ರಮ
Head and Neck Cancer Direct Phone-in Program
ಬೆಳಗಾವಿ 26: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ, ನೂತನ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ ದಿನಾಂಕ 26ನೆ ಜುಲೈ 2025 ರಂದು ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆಯ ಹಿರಿಯ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ ಡಾ. ರಾಜೇಂದ್ರ ಮೇಟಗುಡ್ಡಮಠ ಅವರು ಭಾಗವಹಿಸಿ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಎಂದರೇನು, ಕಾರಣಗಳು, ಮುಖ್ಯ ಲಕ್ಷಣಗಳು, ವಿಧಗಳು, ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚುವುದು ಹೇಗೆ, ಈ ಕ್ಯಾನ್ಸರ್‌ದಿಂದ ಚೇತರಿಸಿಕೊಂಡವರಿಗೆ ದೀರ್ಘಕಾಲಿನ ಆರೈಕೆ ಹೇಗಿರಬೇಕು ಮತ್ತು ಕೆಎಲ್‌ಇ ಸಂಸ್ಥೆಯ ನೂತನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸೆ ಹಾಗೂ ಸೇವಾ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ಗೆ ಸಂಭಂದಿಸಿದ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 