ಮಹಾಜನದಹಳ್ಳಿಯಲ್ಲಿ ಆರೋಗ್ಯ ತಪಾಸಣೆ
ಲೋಕದರ್ಶನ ವರದಿ
ಹೂವಿನಹಡಗಲಿ: ತಾಲೂಕಿನ ಮಹಾಜನದಹಳ್ಳಿ ಗ್ರಾ.ಪಂ. ವ್ಯಾಪ್ತಿಯ ವಿಕಲಚೇತನರು ಹಾಗೂ ಪಾಲಕರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು, ಮನೆ ಮನೆಗೆ UDIDಮಾಸಾಚರಣೆ, ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಗ್ರಾ.ಪಂ. ವ್ಯಾಪ್ತಿಯ 50ಕ್ಕೂ ಹೆಚ್ಚು ಫಲಾನುಭವಿಗಳು ಹಾಜರಾಗಿ ಶಿಬಿರವನ್ನು ಯಶಸ್ವಿಗೊಳಿಸಿದರು.ಗ್ರಾ.ಪಂ. ಕಾರ್ಯದರ್ಶಿ ಡಾ.ಪ್ರಭಾಕರ, ಇಟ್ಟಿಗಿ ಪ್ರಾ.ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಪ್ರಕಾಶ, ಹಾಗೂ ಸಿಬ್ಬಂದಿ, ತಾಲೂಕು ಆರೋಗ್ಯ ಸಂಯೋಜಕರಾದ ಕೊಟ್ರೇಶ್, ಅಂಗನವಾಡಿ ಕಾರ್ಯಕರ್ತಿಯಾದ ಮಮತಾ, VRW ಶಿವರಾಜ್ ಗ್ರಾ.ಪಂ. ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು