ಆರೋಗ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳಿಗೆ ಸದ್ಯಕ್ಕೆ ರಜೆ ಇಲ್ಲ
ಬೆಂಗಳೂರು, ಆ 8 ತೀವ್ರ ನೆರೆಹಾವಳಿಗೆ ತುತ್ತಾಗಿರುವ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳಿಗೆ ಸದ್ಯಕ್ಕೆ ಯಾವುದೇ ರಜೆಯಿಲ್ಲ ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿಗೆ ಸದ್ಯಕ್ಕೆ ರಜೆ ಮಂಜೂರು ಮಾಡದಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಗದಗ, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೀದರ್, ಬೆಳಗಾವಿ, ಚಿಕ್ಕೋಡಿ, ರಾಯಚೂರು, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ತೀವ್ರ ನೆರೆಹಾವಳಿ ತಲೆದೋರಿದೆ. ಈ ಜಿಲ್ಲೆಗಳಲ್ಲಿ ನೆರೆಹಾವಳಿ ಕಡಿಮೆಯಾಗಿ ಪರಿಸ್ಥಿತಿ ಸುಧಾರಿಸುವವರೆಗೆ ಜಿಲ್ಲಾಧಿಕಾರಿಗಳು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಣಯಗಳನ್ನು ಕೈಗೊಳ್ಳುವವರೆಗೂ ಯಾರಿಗೂ ಆ. 9 ರಿಂದ 15 ರವರೆಗೆ ನಿರ್ಬಂಧಿತ ರಜೆ, ಸಾರ್ವತ್ರಿಕ ರಜೆಯನ್ನೊಳಗೊಂಡಂತೆ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 