ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ
Health and Family Welfare Minister's tour program
ಗದಗ 4: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನವೆಂಬರ್ 5 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ಇವರ ಈ ಕೆಳಗಿನಂತಿದೆ.
ನವೆಂಬರ್ 5 ರಂದು ಬೆಳಿಗ್ಗೆ 9.15 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ನರಗುಂದ ಮಾರ್ಗವಾಗಿ ಗದಗ ಜಿಲ್ಲೆಯ ಹೊಳೆಆಲೂರಿಗೆ ಬೆಳಿಗ್ಗೆ 11.15 ಗಂಟೆಗೆ ಆಗಮಿಸುವರು. ಬೆಳಿಗ್ಗೆ 11.30 ಗಂಟೆಗೆ ಹೊಳೆ ಆಲೂರು ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.15 ಗಂಟೆಗೆ ಹೊಳೆ ಆಲೂರದಿಂದ ರೋಣಕ್ಕೆ ಆಗಮಿಸಿ ಮಧ್ಯಾಹ್ನ 1 ಗಂಟೆಗೆ ರೋಣ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಬಿಪಿಎಚ್ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ರೋಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 4.45 ಗಂಟೆಗೆ ಗದಗ ಜಿಲ್ಲೆಯ ಕೊಡಗನೂರಿಗೆ ಆಗಮಿಸುವರು. ಸಂಜೆ 5.15 ಗಂಟೆಗೆ ಕೊಡಗನೂರು ಎಎಎಂ ಸಬ್ ಸೆಂಟರ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.45 ಗಂಟೆಗೆ ಕೊಡಗನೂರದಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 