ಭಾರಿ ಮಳೆ, ಪೋರ್ಚುಗಲ್ನಲ್ಲಿ ಪ್ರವಾಹ
ಲಿಸ್ಬನ್, ಆಗಸ್ಟ್ 27 ಭಾರಿ ಮಳೆಯಿಂದಾಗಿ ಲಿಸ್ಬನ್ನ ದಕ್ಷಿಣದ ಅಲೆಂಟೆಜೊದ 20 ಕ್ಕೂ ಹೆಚ್ಚು ವಸತಿಪ್ರದೇಶ ಮತ್ತು ಸಾರ್ವಜನಿಕ ರಸ್ತೆಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಬಾಧಿತವಾಗಿದೆ ಎಂದು ಪೋರ್ಚುಗೀಸ್ ಲೂಸಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪರಿಹಾರ ತಂಡದ ಅಧಿಕಾರಿ ನೀಡಿದ ಮಾಹಿತಿ ಪ್ರಕಾರ ಸೋಮವಾರ 8ರಿಂದ 10 ಗಂಟೆಯವರೆಗೆ ಸುರಿದ ಮಳೆಯಿಂದ ಅನೇಕ ಕಡೆ ಪ್ರವಾಹ ಉಂಟಾಗಿದೆ. ಐತಿಹಾಸಿಕ ಕೇಂದ್ರದಲ್ಲಿ ವಾಸಿಸುತ್ತಿದ್ದ 76 ವರ್ಷದ ಮಹಿಳೆಯನ್ನು ಸ್ಥಳಾಂತರ ಮಾಡಿ ನಂತರ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ. ಮಳೆ , ಪ್ರವಾಹದ ಕಾರಣ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 