ಭಾರಿ ಮಳೆಗೆ ಮನೆ ಬಿದ್ದು ಹಾನಿ
ಲೋಕದರ್ಶನ ವರದಿ
ಮುಂಡಗೋಡ:ತಾಲೂಕಿನಲ್ಲಿ ನಿರಂತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಸೋಮವಾರ ಪಟ್ಟಣದ ನೆಹರು ನಗರದ ಅಶೋಕ ರಾಮಗಿರಿ ಎಂಬುವರ ಮನೆ ಗೋಡೆ ಕುಸಿದು ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರೀಶೀಲನೆ ನಡೆಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.