ಗುರುವಾರದಿಂದ ಕರಾವಳಿಯಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್
ಬೆಂಗಳೂರು , ಆ 4 ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಅರ್ಬಟ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಬುದವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ
ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾದರೆ, ರಾಜ್ಯದ ಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇದರ ಜೊತೆಗೆ ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿರುವುದರಿಂದ ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ವರದಿ ಹೇಳಿದೆ .