ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
Heavy rains in Bylahongal: River-like roads, water-logged two-wheelers
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ಪಟ್ಟಣ ಸೇರಿ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆರಾಯ ಅರ್ಭಟಕ್ಕೆ ಪಟ್ಟಣದ ಪ್ರಮುಖ ರಸ್ತೆಗಳು ನದಿಯಂತಾಗಿ ಭಾಸವಾದವು. ಈ ಮಳೆಯ ನೀರಿನ ರಭಸಕ್ಕೆ ದ್ವಿಚಕ್ರ ವಾಹನಗಳ ಸವಾರರು ಎಳೆದುಕೊಂಡು ಹೋಗುವಂತ ಸನ್ನಿವೇಶ ಎದುರಾಗಿದೆ.
ಬೈಲಹೊಂಗಲ ಪಟ್ಟಣದಲ್ಲಿ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಸುರಿದ 2 ತಾಸುಗಳ ವರೆಗೆ ಸುರಿದ ಭಾರಿ ಮಳೆಯು ಅವಾಂತರ ವನ್ನು ಸೃಷ್ಟಿಸಿದೆ. ರಸ್ತೆಗಳು ನದಿಯಂತಾಗಿ ಕಂಡು ಬಂದವು. ಅಲ್ಲದೆ ಬೈಲಹೊಂಗಲ ಪಟ್ಟಣಕ್ಕೆ ಸಾಗುವ ಸುತ್ತ ಮುತ್ತಲಿನ ಪ್ರದೇಶಗಳ ರಸ್ತೆ ಮೇಲೆ ನೀರು ಹರಿಯುತ್ತಿರುವ ನಿಟ್ಟಿನಲ್ಲಿ ಸಂಪರ್ಕ ಬಕಡಿತಗೊಂಡಿದ್ದವು.
ಪಟ್ಟಣದಲ್ಲಿನ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಕೆಲವು ದ್ವಿಚಕ್ರ ವಾಹನ ಗಳ ಸವಾರರು ನೀರಿನ ಸೆಳೆತಕ್ಕೆ ಸಿಲುಕಿ ಪರದಾಡುವಂತ ಪರಿಸ್ಥಿತಿ ಎದುರಾಯಿತು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 