ಚನಬಸ್ಸು ಧರನಟ್ಟಿ ಪುತ್ರಿ ನಿಧನಕ್ಕೆ ಹೆಬ್ಬಾಳಕರ್ ಸಂತಾಪ
ಕರಿಕಟ್ಟಿ 05 : ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಚನಬಸ್ಸು ಧರನಟ್ಟಿ ಅವರ ಪುತ್ರಿ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಧರನಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.