ಬಸನಗೌಡ ಹುಂಕರಿ ಪಾಟೀಲ ನಿಧನಕ್ಕೆ ಹೆಬ್ಬಾಳಕರ್ ಸಂತಾಪ

ಬಸನಗೌಡ ಹುಂಕರಿ ಪಾಟೀಲ ನಿಧನಕ್ಕೆ ಹೆಬ್ಬಾಳಕರ್ ಸಂತಾಪ  Hebbalkar condoles the demise of Basanagouda Hunkari Patil


ಸುಳೇಭಾವಿ 05 ಸುಳೇಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಸನಗೌಡ ಬಾಳಪ್ಪ ಹುಂಕರಿಪಾಟೀಲ ಅವರ ನಿಧನಕ್ಕೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದರು. ಅವರ ನಿವಾಸಕ್ಕೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.