ಪ್ರತ್ಯೇಕ ಸಭೆ ನಡೆಸದಂತೆ ಹೈಕಮಾಂಡ್ ಸೂಚನೆ:ವರಿಷ್ಠರ ಆದೇಶ ದಿಕ್ಕರಿಸಿ ಸಭೆ ನಡೆಸಿದ ಶಾಸಕರು!
ಬೆಂಗಳೂರು,ಫೆ 4- ಸಚಿವ ಸ್ಥಾನಕ್ಕಾಗಿ ಒತ್ತಡ ಹೇರಿ ಪ್ರತ್ಯೇಕ ಸಭೆಯನ್ನು ನಡೆಸದಂತೆ ಬಿಜೆಪಿ ಹೈಕಮಾಂಡ್ ನೀಡಿದ್ದ ಸೂಚನೆಯನ್ನು ಧಿಕ್ಕರಿಸಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಪ್ರತ್ಯೇಕ ಸಭೆ ನಡೆಸಿ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಶಾಸಕರ ಭವನದಲ್ಲೇ ಸಭೆ ನಡೆಸಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಬಾರದಂತೆ ಎಚ್ಚರಿಕೆ ಹೆಜ್ಜೆಯಿಟ್ಟಿದ್ದಾರೆ.ಶಾಸಕರ ಭವನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಪ್ರತ್ಯೇಕ ಸಭೆಯನ್ನು ಗಂಭೀವಾಗಿ ಪರಿಗಣಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇನ್ನುಮುಂದೆ ಇಂತಹ ಸಭೆ ನಡೆಸದಂತೆ ಸೂಚನೆ ನೀಡಿದ್ದಾರೆ. ಸಭೆಯ ನೇತೃತ್ವ ವಹಿಸಿದ್ದ ಸುರಪುರ ಶಾಸಕ ರಾಜೂಗೌಡ ಹಾಗೂ ಮತ್ತೋರ್ವ ಶಾಸಕರಿಗೆ ದೂರವಾಣಿ ಕರೆ ಮೂಲಕ ಸಂತೋಷ್ ಸೂಚನೆ ನೀಡಿ ಪಕ್ಷದ ಚೌಕಟ್ಟು ಮೀರದಂತೆ ತಿಳಿಸಿದ್ದರು.
ಹೈಕಮಾಂಡ್ ನಿಂದ ಸಂದೇಶ ಬರುತ್ತಿದ್ದಂತೆ ಇಂದು ಬೆಳಗ್ಗೆ ಯಾವುದೇ ಸಭೆ ನಡೆಸುವ ಗೋಜಿಗೆ ಶಾಸಕರು ಹೋಗಲಿಲ್ಲ, ನಂತರ ಬೇರೆ ಕಡೆ ಸಭೆ ನಡೆಸುವ ಚಿಂತನೆ ನಡೆಸಿ ಮಾಧ್ಯಮಗಳಿಂದಲೂ ದೂರ ಉಳಿದಿದ್ದರು. ಆದರೆ ಮಧ್ಯಾಹ್ನ ಮತ್ತೆ ಶಾಸಕರ ಭವನದಲ್ಲಿಯೇ ಹೈಕಮಾಂಡ್ ಸೂಚನೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆ.
ರಾಜೂಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಸೇಡಂ ಶಾಸಕ ರಾಜಕುಮಾರ್ ಪಾಟೀಲ್, ಕನಕಗಿರಿ ಶಾಸಕ ಬಸವರಾಜ ದಡೇಸಗೂರು, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ರಾಯಚೂರು ಶಾಸಕ ಶಿವರಾಜ್ ಪಾಟೀಲ್ ಭಾಗಿಯಾಗಿದ್ದರು. ನಿನ್ನೆಯ ಸಭೆಯಲ್ಲಿದ್ದ ಮುರುಗೇಶ್ ನಿರಾಣಿ ಹಾಗು ರೇಣುಕಾಚಾರ್ಯ ಇಂದಿನ ಸಭೆಯಿಂದ ದೂರ ಉಳಿದಿದ್ದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಗಬೇಕು,ಸಂಪುಟ ವಿಸ್ತರಣೆ ವೇಳೆ ಇಬ್ಬರಿಗೆ ಅವಕಾಶ ನೀಡಬೇಕು. ಈ ಕುರಿತು ಮುಖ್ಯಮಂತ್ರಿ ಹಾಗು ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಬೇಕು ಎನ್ನುವ ನಿರ್ಣಯದೊಂದಿಗೆ ಸಭೆ ನಡೆಸಲಾಯಿತು.
ಪಕ್ಷದ ವೇದಿಕೆ ಹೊರತುಪಡಿಸಿ ಇತರೆಡೆ ಸಭೆ ನಡೆಸಿದರೆ ಅದು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪಕ್ಕೆ ಸಿಲುಕಬೇಕಾಗಲಿದೆ ಎನ್ನುವ ಕಾರಣಕ್ಕೆ ಶಾಸಕರ ಭವನವನ್ನು ಸಭೆಗೂ ಆಯ್ಕೆ ಮಾಡಿಕೊಂಡಿದ್ದರು. ಒಂದು ವೇಳೆ ಪಕ್ಷದಿಂದ ನೋಟಿಸ್ ನೀಡಿದರೂ ಶಾಸಕರ ಭವನದಲ್ಲಿ ಉಪಹಾರಕ್ಕೆ ಸೇರಿದ್ದೆವು ಎಂದು ಸಮರ್ಥನೆ ಮಾಡಿಕೊಳ್ಳುವ ಅವಕಾಶ ಇರುವ ಕಾರಣ ಹೋಟೆಲ್ ಬದಲು ಕೊನೆ ಕ್ಷಣದಲ್ಲಿ ಶಾಸಕರ ಭವನವನ್ನೇ ಆಯ್ಕೆ ಮಾಡಿಕೊಂಡು ಸಭೆ ನಡೆಸಿರುವುದಾಗಿ ತಿಳಿದು ಬಂದಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 