ಉತ್ತಮ ಗುಣಮಟ್ಟವುಳ್ಳ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುವುದು
ಬ್ಯಾಡಗಿ 15: ಮುಂಬರುವ ದಿನಗಳಲ್ಲಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಬರುವ ಎಲ್ಲಾ ಡಾಂಬರ್ ರಸ್ತೆಗಳನ್ನು ಸಂಪೂರ್ಣವಾಗಿ ಉತ್ತಮ ಗುಣಮಟ್ಟವುಳ್ಳ ಕಾಂಕ್ರೀಟ್ ರಸ್ತೆಗಳನ್ನಾಗಿ ನಿರ್ಮಿಸಲಾಗುವುದು ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.
ಮಂಗಳವಾರ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ನಬಾರ್ಡ್ ಯೋಜನೆಯಡಿ ಮಂಜೂರಾದ 9.67ಕೋಟಿ ರೂಗಳ ವೆಚ್ಚದ ಕಾಂಕ್ರೀಟ್ ರಸ್ತೆ, ಕಾಲುವೆ ಹಾಗೂ ಸಿಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಒಣ ಮೆಣಸಿನಕಾಯಿ ವ್ಯಾಪಾರಕ್ಕೆ ವಿಶ್ವವಿಖ್ಯಾತಿ ಪಡೆದಿರುವ ಬ್ಯಾಡಗಿ ಮಾರುಕಟ್ಟೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಗುಣಮಟ್ಟದಲ್ಲಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕೋಟ್ಯಾಂತರ ರೂಗಳ ಅನುದಾನವನ್ನು ತರಲು ತಾವು ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಿದ್ದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ವೀರಭದ್ರ್ಪ ಗೊಡಚಿ, ಪುರಸಭಾಧ್ಯಕ್ಷೆ ಕವಿತಾ ಸೊಪ್ಪಿನಮಠ, ಎಸ್.ಎನ್.ಮಾತನವರ, ಸುರೇಶ ಯತ್ನಳ್ಳಿ, ಎಪಿಎಂಸಿ ಉಪಾಧ್ಯಕ್ಷ ಉಳಿವೆಪ್ಪ ಕುರುವತ್ತಿ, ಸದಸ್ಯರಾದ ಡಿ.ಬಿ.ತೋಟದ, ಚನಬಸಪ್ಪ ಹುಲ್ಲತ್ತಿ, ವಿಜಯ ಮಾಳಗಿ, ಪುರಸಭೆ ಸದಸ್ಯರಾದ ಫಕ್ಕೀರಮ್ಮ ಚಲುವಾದಿ, ಸರೋಜಾ ಉಳ್ಳಾಗಡ್ಡಿ, ಗಾಯತ್ರಿ ರಾಯ್ಕರ್, ಸುರೇಶ ಉದ್ಯೋಗಣ್ಣನವರ, ಜಿತೇಂದ್ರ ಸುಣಗಾರ, ಮುರಿಗೆಪ್ಪ ಶೆಟ್ಟರ, ಪರುಶರಾಮ ಉಜನಿಕೊಪ್ಪ,ಎಪಿಎಂಸಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎ.ಬಿ.ಭಾಯಿಸರ್ಕಾರ್, ಸಹಾಯಕ ಅಭಿಯಂತರ ಕೃಷ್ಣಾ ಆರೇರ್, ಗುತ್ತಿಗೆದಾರ ಗೋಪಾಲ ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.