ಕೊನೆಯಾಗದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹೈ ವೋಲ್ಟೇಜ್ ರಾಜಕೀಯ : ರಾಜಹಂಸಗಡದಲ್ಲಿ ನಾಳೆಯೇ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಮುಂದಾದ ಲಕ್ಷ್ಮೀ ಹೆಬ್ಬಾಳ್ಕರ್ !
ಬೆಳಗಾವಿ : ಬೆಳಗಾವಿಯ ಗ್ರಾಮೀಣ ಕ್ಷೇತ್ರದಲ್ಲಿನ ರಾಜಹಂಸಗಡದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಉಂಟಾಗಿರುವ ಹೈ ವೊಲ್ಟೇಜ್ ರಾಜಕೀಯ ಕದನ ಇನ್ನು ಕೊನೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ, ಹೊರತಾಗಿ ಹೆಚ್ಚಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ರಾಜಹಂಸಗಡ ಕೋಟೆಯಲ್ಲಿ ಬುಧವಾರ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಇದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಮತ್ತು ಶಿವಾಜಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಈ ಮೊದಲು ಆದರೆ ಮಾರ್ಚ್ 5 ರಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಮುಂದಾಗಿದ್ದರು. ಆದರೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಇದೊಂದು ಕಾಂಗ್ರೆಸ್ ಕಾರ್ಯಕ್ರಮ ಎಂದು ಟೀಕಿಸಿದ್ದರು. ನಂತರ ಮುಖ್ಯಮಂತ್ರಿ ಅವರನ್ನು ಒಪ್ಪಿಸಿ ಮಾರ್ಚ್ 2ರಂದು ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಂದಾಗಿದ್ದರು.
ಆದರೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಮಾರ್ಚ್ 1ರಂದೆ ಶಿವಾಜಿ ಪ್ರತಿಮೆ ಅನಾವರಣಕ್ಕೆ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಂದಾಗಿದ್ದಾರೆ ಎನ್ನಾಲಗಿದೆ. ಒಟ್ಟಾರೆ ಇದೀಗ ಶಿವಾಜಿ ಪ್ರತಿಮೆ ಅನಾವರಣ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಮೇಲಾಟಕ್ಕೆ ಕಾರಣವಾಗಿದೆ. ಅಲ್ಲದೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿನ ರಾಜಹಂಸಗಡ ರಾಜಕೀಯ ಯಾವ ಹಂತಕ್ಕೆ ಹೋಗಿ ತಲುಒಲಿದೆ ಎನ್ನುವದನ್ನು ಕಾದು ನೋಡಬೇಕಿದೆ.
ನಾಳೆ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಇಲ್ಲ : ಹೆಬ್ಬಾಳಕರ್ ಸ್ಪಷ್ಟನೆ
ಬೆಳಗಾವಿ : ನಾಳೆ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆ ಮಾಡಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಂದಾಗಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳಾಗಿದ್ದು, ನಾಳೆ ಯಾವುದೇ ಕಾರ್ಯಕ್ರಮವನ್ಬು ನಾವು ಹಮ್ಮಿಕೊಂಡಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ.
ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ವಿಷಯದಲ್ಲಿ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ದಯವಿಟ್ಟು ಮಾಧ್ಯಮದವರು ಇದನ್ನು ಗಮನಿಸಬೇಕು. ಯಾರು ವದಂತಿಗಳಿಗೆ ಕಿವಿಗೊಡಬಾರದು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಕೋರಿದ್ದಾರೆ.
ಮಾರ್ಚ್ 1ರಂದು ಬೆಳಗ್ಗೆ 10 ಗಂಟೆಗೆ ಪಂತಬಾಳೆಕುಂದ್ರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಆ ಕಾರ್ಯಕ್ರಮದ ಸಿದ್ಧತೆಯಲ್ಲಿದ್ದಾರೆ. ನಾಳೆ ಬೇರೆ ಯಾವುದೇ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.