ಶಿಗ್ಗಾವ್

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೇಸ ಪಕ್ಷದ ವತಿಯಿಂದ ಪಾದಯಾತ್ರೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೇಸ ಪಕ್ಷದ ವತಿಯಿಂದ ಪಾದಯಾತ್ರೆ

ಲೋಕದರ್ಶನ ವರದಿ 

ಶಿಗ್ಗಾವಿ : ನಮ್ಮ ನೀರು ನಮ್ಮ ಹಕ್ಕು ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಮತ್ತು ಕಾವೇರಿ ಜಲಾನಯನ ಪ್ರದೇಶದ ರೈತರ ಕಲ್ಯಾಣದ ಉದ್ದೇಶದಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೇಸ ಪಕ್ಷದ ವತಿಯಿಂದ ಜನೇವರಿ 9 ರಿಂದ 19 ರವರೆಗೆ ಕೈಗೊಂಡ ಸಂಗಮದಿಂದ ಬೆಂಗಳೂರವರೆಗೆ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಸದಸ್ಯ ಷಣ್ಮುಖ ಶಿವಳ್ಳಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದರವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು ಅಲ್ಲದೇ ಅವರನ್ನು ಸನ್ಮಾನಿಸಿದರು ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ರಾಜ್ಯಘಟಕದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ