ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ
ಶಿಗ್ಗಾವಿ 11: ನಮ್ಮ ನೀರು ನಮ್ಮ ಹಕ್ಕು ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಮತ್ತು ಕಾವೇರಿ ಜಲಾನಯನ ಪ್ರದೇಶದ ರೈತರ ಕಲ್ಯಾಣದ ಉದ್ದೇಶದಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ ಪಕ್ಷದ ವತಿಯಿಂದ ಜನೇವರಿ 9 ರಿಂದ 19 ರವರೆಗೆ ಕೈಗೊಂಡ ಸಂಗಮದಿಂದ ಬೆಂಗಳೂರವರೆಗೆ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ತಾಲೂಕಿನ ಕ್ಷೇತ್ರದ ಕೆ.ಪಿ.ಸಿ.ಸಿ ಎಸ್.ಟಿ. ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿಯವರು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರೊಂದಿಗೆ 3 ನೇ ದಿನದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು ಅಲ್ಲದೇ ಕೆ.ಪಿ.ಸಿ.ಸಿ ರಾಜ್ಯ ಘಟಕದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.