ಅ.4ರಂದು ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ
ಲೋಕದರ್ಶನ ವರದಿ
ಬೀಳಗಿ ಅ.2: ಪಟ್ಟಣದಲ್ಲಿ 21 ದಿನಗಳ ಕಾಲ ಪ್ರತಿಷ್ಠಾಪಿಸಿ, ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಭಕ್ತರಿಗೆ ಆಶೀರ್ವಾದ ನೀಡಿದ ಹಿಂದೂ ಮಹಾಗಣಪತಿಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಅ.4ರಂದು ಅದ್ಧೂರಿಯಾಗಿ ನಡೆಯಲಿದೆ ಎಂದು ಹಿಂದೂ ಮಹಾಗಣಪತಿ ಸ್ವಾಗತ ಸಮಿತಿ ಉಪಾಧ್ಯಕ್ಷ ಮುತ್ತು ಭೋಜಿ ಹಾಗೂ ಕೋಶಾಧ್ಯಕ್ಷ ವೀರಣ್ಣ ತೋಟದ ಜಂಟಿಯಾಗಿ ತಿಳಿಸಿದರು.
ಪಟ್ಟಣದ ಮೆನ್ಬಜಾರ್ನ ಕಾಯಿಪಲ್ಯ ಬಜಾರ್ನಲ್ಲಿರುವ ಹಿಂದೂ ಮಹಾಗಣಪತಿ ಮಂಟಪದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅ.4ರಂದು ಸಂಜೆ 7.30ಕ್ಕೆ ವಿವಿಧ ವಾದ್ಯ ವೈಭವಗಳೊಂದಿಗೆ ಶೋಭಾಯಾತ್ರೆ ಆರಂಭವಾಗಲಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತ ತಲುಪಿದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಬಸವೇಶ್ವರ ವೃತ್ತದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವಿಧಾನ ಪರಿಷತ್ ಸದಸ್ಯ ಹಾಗೂ ಹಿಂದೂ ಮುಖಂಡ ಸಿ.ಟಿ. ರವಿ ಮುಖ್ಯ ವಕ್ತಾರರಾಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಹಾಗೂ ಹಿಂದೂ ಮಹಾಗಣಪತಿ ಮಂಡಳಿ ಅಧ್ಯಕ್ಷ ಮುರುಗೇಶ್ ನಿರಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.