ಬೆಳಗಾವಿಯಲ್ಲಿ ಹಿಂದೂ ಸಂಘಟನೆಯ ಮುಖಂಡ ರವಿ ಕೋಕಿತ್ಕರ ಮೇಲೆ ಅನಾಮಧೇಯರಿಂದ ಗುಂಡಿನ ದಾಳಿ : ಪ್ರಾಣಾಪಾಯದಿಂದ ಪಾರು
ಬೆಳಗಾವಿ : ಬೆಳಗಾವಿಯ ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವ ಮುಖಂಡ ರವಿ ಕೋಕಿತ್ಕರ್ ಅವರ ಮೇಲೆ ಇಂದು ಸಂಜೆ ಹಿಂಡಲಗಾ ಗ್ರಾಮದಲ್ಲಿ ಗುಂಡಿನ ದಾಳಿ ಮಾಡಲಾಗಿದೆ. ಇದರಿಂದ ಗಾಯಗೊಡಿರುವ ರವಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದು ಸಂಘಟನೆಯ ಮುಖಂಡ ರವಿ ಅವರು ಇಂದು ಸಂಜೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಗುಂಡಿನ ದಾಳಿ ಮಾಡಲಾಗಿದೆ. ಅವರ ಕುತ್ತಿಗೆ ಬಳಿಯಲ್ಲಿ ಗುಂಡು ತಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರವಿಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಆದರೆ ಗುಂಡಿನ ದಾಳಿ ನಡೆಸಿದವರು ಯಾರು ಎನ್ನುವದು ಮಾತ್ರ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.