ಜಮಖಂಡಿ

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

 ಲೋಕದರ್ಶನ ವರದಿ, 

         ಜಮಖಂಡಿ 13 : ತಾಲ್ಲೂಕಿನ ಕುಂಬಾರಹಳ್ಳ ಗ್ರಾಮದ ಸಮೀಪ ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. 

         ಮೃತ ವ್ಯಕ್ತಿಯನ್ನು ಜಮಖಂಡಿ ನಗರದ ಅರಳಿಕಟ್ಟಿ ನಿವಾಸಿ ಶ್ರೀಶೈಲ ಶಂಕರ ಅರಕೇರಿ (45) ಎಂದು ಗುರುತಿಸಲಾಗಿದೆ.ಶ್ರೀಶೈಲ ಅವರು ರಾತ್ರಿ ವೇಳೆಯಲ್ಲಿ ಜಮಖಂಡಿಯಿಂದ ವಿಜಯಪುರದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕುಂಬಾರಹಳ್ಳ ಸಮೀಪ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. 

             ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಇತರೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸ್ ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. 


ಸುದ್ದಿ ಓದಿ