ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು
ಲೋಕದರ್ಶನ ವರದಿ
ಗೋಕಾಕ ಆ.2: ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನಲ್ಲಿ ನಡೆದಿದೆ. ನಲ್ಲಾನಟ್ಟಿ ಗ್ರಾಮದ ಯಲ್ಲಪ್ಪ ಸಿದ್ದಪ್ಪ ಬೆಳಗಲಿ (49) ಮೃತಪಟ್ಟವರು. ಜುಲೈ 30ರಂದು ರಾತ್ರಿ ಸುಮಾರು 10 ಗಂಟೆಗೆ ನ್ಘಿ್ಣ್ಝ್ತೌಹ್ದ್ಘಿ್ದುದಿಳ್ತ ರಸ್ತೆಯಲ್ಲಿ ಅವರು ತಮ್ಮ ಕೆಎ-47-ಜೆ-5762 ಸಂಖ್ಯೆಯ ಮೋಟಾರ್ಸೈಕಲ್ನಲ್ಲಿ ದುರದುಂಡಿಯಿಂದ ನಲ್ಲಾನಟ್ಟಿ ಕಡೆಗೆ ತೆರಳುತ್ತಿದ್ದ ವೇಳೆ, ಎದುರು ಬಂದ ಅಪರಿಚಿತ ವಾಹನವು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಯಲ್ಲಪ್ಪ ಅವರಿಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ಚಿಕಿತ್ಸೆಗಾಗಿ ಬೆಳಗಾವಿಯ ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜುಲೈ 31ರಂದು ರಾತ್ರಿ 10.20ಕ್ಕೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತರ ಪತ್ನಿ ಸುನಂದಾ ಯಲ್ಲಪ್ಪ ಬೆಳಗಲಿ ಅವರು ನೀಡಿದ ದೂರಿನ ಮೇರೆಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 213/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ಕಲಂ 281, 106(1) ಹಾಗೂ ಮೋಟಾರು ವಾಹನ ಕಾಯ್ದೆಯ ಕಲಂ 134, 187ರಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಘಟಪ್ರಭಾ ಪೊಲೀಸ್ ಠಾಣೆಯ ಪೊಲೀಸರು ಮುಂದುವರಿಸಿದ್ದಾರೆ.