ರಜೆ: ಮುಂಚಿತವಾಗಿ ಶಾಲೆಯಲ್ಲಿ ದೀಪಾವಳಿ ಆಚರಣೆ
Holiday: Diwali celebration in school in advance
ಲೋಕದರ್ಶನ ವರದಿ
ರಜೆ: ಮುಂಚಿತವಾಗಿ ಶಾಲೆಯಲ್ಲಿ ದೀಪಾವಳಿ ಆಚರಣೆ
ಮಹಾಲಿಂಗಪುರ 21: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರಾಥಮಿಕ ಶಾಲೆಯಲ್ಲಿ ದೀಪಾವಳಿ ಮುನ್ನವೇ ಹಬ್ಬ ಆಚರಿಸಿ ಸಂಭ್ರಮಿಸಿದರು. ಭಾನುವಾರದಿಂದ ಬುಧವಾರ ತನಕ ಶಾಲೆಗೆ ರಜೆ ಇದ್ದುದರಿಂದ ಮಕ್ಕಳಲ್ಲಿ ಹಬ್ಬದ ಕ್ರಮ ಮತ್ತು ಸಂಭ್ರಮ ಗೊತ್ತಾಗಲಿ ಎಂಬ ಕಾರಣಕ್ಕಾಗಿ ಶನಿವಾರ ದಿನವೇ ಶಾಲೆಯಲ್ಲಿ ಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳು ಲಂಗ ದಾವಣಿ, ಸೀರೆಯುಟ್ಟು ಹರ್ಷದಿಂದ ಶಾಲೆಗೆ ತೆರಳಿ ತರಗತಿಗಳನ್ನೆಲ್ಲಾ ತಳಿರು-ತೋರಣಗಳಿಂದ ಅಲಂಕರಿಸಿ, ಅಂಗಳದಲ್ಲಿ ರಂಗೋಲಿ ಹುಯ್ದು, ಕಬ್ಬು-ಬಾಳೆಗಿಡದಿಂದ ಮಂಟಪ ಸಿದ್ದಪಡಿಸಿ, ಲಕ್ಷ್ಮೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ವಿವಿಧ ಅಂಗ ಸಂಸ್ಥೆಗಳ ಸಿಬ್ಬಂದಿಗೆ ಸಂಪ್ರದಾಯದಂತೆ ಕುಂಕುಮ ಹಚ್ಚಿ ಪೂಜಾ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಸಾದ ರೂಪದಲ್ಲಿ ಸಿಹಿ ಮತ್ತು ಬಾದಾಮಿ ಹಾಲು ಸವಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 