ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಪ್ರಗತಿ ಪರಿಶೀಲನೆ
ಹಾವೇರಿ: ಕರ್ನಾಟಕ ಸರ್ಕಾರದ ವಸತಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್ಕುಮಾರ ಮೀನಾ ಅವರು ಜಿಲ್ಲೆಯ ವಿವಿಧ ನೆರೆ ಸಂತ್ರಸ್ತ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾರ್ಯ ಆರಂಭ ಕುರಿತಂತೆ ಪರಿಶೀಲನೆ ನಡೆಸಿದರು.
ಗುರುವಾರ ಶಿಗ್ಗಾಂವ ಹಾಗೂ ಸವಣೂರು, ಹುರಳಿಕೊಪ್ಪಿ, ಕುರುಬರಮಲ್ಲೂರು, ಕುಣಿಮೆಳ್ಳಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಮನೆ ನಿರ್ಮಾಣ ಕುರಿತಂತೆ ಅಧಿಕಾರಿಗಳು ಹಾಗೂ ಸಂತ್ರಸ್ತರೊಂದಿಗೆ ಮಾಹಿತಿ ಪಡೆದರು.
ಮಳೆ ಮತ್ತು ನೆರೆಯಿಂದ ಕುಸಿದಿರುವ ಮನೆಗಳನ್ನು ಪುನರ್ ನಿರ್ಮಾಣ ಕುರಿತಂತೆ ಈಗಾಗಲೇ ಮಾನ್ಯ ಮುಖ್ಯಂಮತ್ರಿಗಳು ಕಾಯರ್ಾದೇಶ ಪತ್ರವನ್ನು ಸಂತ್ರಸ್ತರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮವಹಿಸಿದ್ದಾರೆ. ಕಾಯರ್ಾದೇಶಪತ್ರಗಳು ಸಂತ್ರಸ್ತರಿಗೆ ತಲುಪಿದ ಕುರಿತಂತೆ ಫಲಾನುಭವಿಗಳಿಂದ ಮಾಹಿತಿ ಪಡೆದುಕೊಂಡರು.
ವಸತಿ ನಿಮರ್ಾಣಕ್ಕೆ ಫಲಾನುಭವಿಗಳಿಗೆ ಸಂದಾಯವಾಗಿರುವ ಪರಿಹಾರ ಹಣ ಕುರಿತಂತೆ ಫಲಾನುಭವಿಗಳಿಂದ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದಶರ್ಿಗಳಾದ ಮನೋಜ್ಕುಮಾರ ಅವರು ಪರಿಹಾರ ಹಣ ಜಮೆಯಾಗಿರುವ ಕುರಿತಂತೆ ಸಂತ್ರಸ್ತರ ಬ್ಯಾಂಕ್ ಪಾಸ್ ಪುಸ್ತಕ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮನೆ ನಿಮರ್ಾಣ ಆರಂಭ ಮಾಡಿದ ಫಲಾನುಭವಿಗಳಿಗೆ ತಕ್ಷಣವೇ ಮನೆ ನಿರ್ಮಾಣ ಆರಂಭಮಾಡಿ, ಈಗಾಗಲೇ ನಿಮಗೆ ಮೊದಲ ಕಂತು ಹಣ ಜಮೆಯಾಗಿದೆ.
ಎರಡನೇ ಕಂತಿನ ಹಣ ಬಿಡುಗಡೆಗೆ ಇಂದಿನಿಂದಲೇ ಜಿ.ಪಿ.ಎಸ್. ಮಾಡಿ ದಾಖಲೆಗಳನ್ನು ನಿಗಮದ ವೆಬ್ಸೈಟ್ಗೆ ಅಪ್ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರಿಂದ ಎರಡನೇ ಕಂತಿನ ಬಿಡುಗಡೆಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತಾ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಕುರಬರಮಲ್ಲಾಪೂರದ ಶುದ್ಧ ನೀರಿನ ಘಟಕ್ಕೆ ಭೇಟಿ ನೀಡಿ ನಳದ ನೀರನ್ನು ಕುಡಿದು ಪರಿಶೀಲನೆ ನಡೆಸಿದರು. ಹುರಳಿಕೊಪ್ಪ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ತಿಪ್ಪೆಗಳ ಸ್ಥಳಾಂತರ ಹಾಗೂ ಕಸದ ಸಂಸ್ಕರಣೆ ಕುರಿತಂತೆ ಜನರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಗ್ರಾಮಗಳ ಜನರೊಂದಿಗೆ ಮಾತನಾಡಿ, ಕುಡಿಯುವ ನೀರಿನ ಮಿತ ಬಳಕೆ ಹಾಗೂ ಗ್ರಾಮದ ಸ್ವಚ್ಛತೆ ಕುರಿತಂತೆ ಗ್ರಾಮಸ್ತರು ಜವಾಬ್ದಾರಿ ತೆಗೆದುಕೊಳ್ಳಬೇಕು, ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಶುದ್ಧ ವಾತಾವರಣ, ಶುದ್ಧ ನೀರು, ಶುದ್ಧ ಪರಿಸರದ ಬಗ್ಗೆ ಜನರು ಕಾಳಜಿ ಹೊಂದಬೇಕು ಎಂದು ಜನರಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಸವಣೂರು ಉಪ ವಿಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ಜಿ.ಪಂ.ಸಕಾಯಕ ಕಾರ್ಯದಶರ್ಿ ಜಾಫರ ಸುತಾರ್, ಶಿಗ್ಗಾಂವ ಹಾಗೂ ಸವಣೂರ ತಹಶೀಲ್ದಾರ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 