ಪ್ರಾಮಾಣಿಕ ಅಧ್ಯಯನವೇ ಯಶಸ್ಸಿನ ಸೂತ್ರ: ಮೇಯರ್ ಪ್ರೀತಿ ಕಾಮಕರ
Honest study is the formula for success: Mayor Preeti Kamakara
ಬೆಳಗಾವಿ 15: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕ ಅಧ್ಯಯನದ ಮೂಲಕ ಶೈಕ್ಷಣಿಕ ಜೀವನವನ್ನು ಯಶಸ್ವಿಗೊಳಿಸಬೇಕೆಂದು ಮಹಾನಗರ ಪಾಲಿಕೆಯ ಮೇಯರ ಪ್ರೀತಿ ಕಾಮಕರ ಹೇಳಿದರು.
ನಗರದ ಖಾಸಭಾಗ ಉಪ್ಪಾರ ಬೀದಿಯ ಬನಶಂಕರಿ ದೇವಸ್ಥಾನ ದೇವಾಂಗ ಸಮಾಜ ಟ್ರಸ್ಟ್ ಹಾಗೂ ಗಾಯತ್ರಿ ಸೇವಾ ಪ್ರತಿಷ್ಠಾನದಿಂದ ಭಾನುವಾರ ಆಯೋಜಿಸಲಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಆಧುನಿಕತೆಯ ಆಕರ್ಷಣೆಗೆ ಒಳಗಾಗದೆ ಉತ್ತಮ ನಡುವಳಿಕೆ ಹಾಗೂ ಗುರು ಹಿರಿಯರನ್ನು ಗೌರವಿಸುವ ನಯ ವಿನಯಪೂರಿತ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಗಣ್ಯರು ಹಾಗೂ ಟ್ರಸ್ಟ್ ಪದಾಧಿಕಾರಿಗಳು, ಹಾಗೂ ಸಮಾಜದ ಬಾಂಧವರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 