ಜೀನ್ಸ್ ಪಾರ್ಕ್ ಭೂಸ್ವಾಧೀನದಲ್ಲಿ ರೈತರಿಗೆ ಅನ್ಯಾಯ ಆರೋಪನ್ಯಾಯಯುತ ಪರಿಹಾರಕ್ಕೆ ಆಗ್ರಹಿಸಿದ ಹೊನ್ನುರಸ್ವಾಮಿ ಕೆ.ಟಿ.
Honnuraswamy KT alleges injustice to farmers in the acquisition of land for the Genes Park and deman
ಬಳ್ಳಾರಿ 15; ಜಿಲ್ಲೆಯ ಪ್ರಸ್ತಾವಿತ ಜೀನ್ಸ್ ಪಾರ್ಕ್ ನಿರ್ಮಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸಂಜೀವರಾಯನಕೋಟೆ ಗ್ರಾಮದ ರೈತ ಹಾಗೂ ಸಾಮಾಜಿಕ ಹೋರಾಟಗಾರ ಹೊನ್ನುರಸ್ವಾಮಿ ಕೆ.ಟಿ. ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಿಂಚೇರಿ, ಸಂಜೀವರಾಯನಕೋಟೆ, ಮುಂಡ್ರಗಿ, ಹಲಕುಂದಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ನಡೆಯುತ್ತಿದ್ದು, ನ್ಯಾಯಯುತ ಪರಿಹಾರ ನೀಡದೆ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಒತ್ತಡ ಮತ್ತು ಬೆದರಿಕೆ ಮೂಲಕ ಭೂಮಿ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.ಕೈಗಾರಿಕೆ ನಿರ್ಮಾಣಕ್ಕೆ ರೈತರು ವಿರೋಧಿಗಳಲ್ಲ. ಆದರೆ ರೈತರ ಬದುಕಿನ ಆಧಾರವಾದ ಭೂಮಿಗೆ ಸೂಕ್ತ ಮೌಲ್ಯ ನೀಡಬೇಕು.
ಕುಡತಿನಿ ಭಾಗದ ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯವು ಪ್ರತಿ ಎಕರೆಗೆ ಸುಮಾರು ?1 ಕೋಟಿ 1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ, ಇದೇ ಮಾದರಿಯಲ್ಲಿ ಈ ಭಾಗದ ರೈತರಿಗೆ ಸಹ ಸಮಾನ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಕೆಲ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಸೇರಿ ಪ್ರತಿ ಎಕರೆಗೆ ಕೇವಲ ?62 ರಿಂದ ?65 ಲಕ್ಷವರೆಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದು ಹೇಳುತ್ತಿದ್ದು, ಅದರಲ್ಲಿ ಕೂಡ ?2 ರಿಂದ ?5 ಲಕ್ಷವರೆಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳೂ ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.“ಈಗ ಒಪ್ಪದಿದ್ದರೆ ಸರ್ಕಾರ ಕಡಿಮೆ ದರಕ್ಕೆ ಭೂಮಿ ಪಡೆದುಕೊಳ್ಳುತ್ತದೆ. ನಂತರ ಏನೂ ಮಾಡಲು ಸಾಧ್ಯವಿಲ್ಲ” ಎಂದು ರೈತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ರೈತರು ಆತಂಕಕ್ಕೊಳಗಾಗಿ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ನಗರ ಶಾಸಕ ಭರತ್ ರೆಡ್ಡಿ ಹಾಗೂ ಗ್ರಾಮೀಣ ಶಾಸಕ ನಾಗೇಂದ್ರ ಅವರು ಮಧ್ಯಪ್ರವೇಶಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ರೈತರಿಗೆ ಯಾವುದೇ ರೀತಿಯ ಒತ್ತಡ ತರದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಮಧ್ಯವರ್ತಿಗಳ ಹಸ್ತಕ್ಷೇಪ ತಡೆಯಬೇಕು. ಭ್ರಷ್ಟಾಚಾರ ಹಾಗೂ ಕಮಿಷನ್ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.“ರೈತರು ಸರ್ಕಾರದ ವಿರುದ್ಧ ಇಲ್ಲ. ಆದರೆ ಬದುಕಿನ ಆಧಾರವಾದ ಭೂಮಿಗೆ ನ್ಯಾಯಯುತ ಬೆಲೆ ಮತ್ತು ಗೌರವ ಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ” ಎಂದು ಹೊನ್ನುರಸ್ವಾಮಿ ಕೆ.ಟಿ. ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 