ಅಮೀರ್ ಹಮ್ಜಾ ನದಾಫ್‌ಗೆ ಸನ್ಮಾನ
Honored for Amir Hamza Nadaf
ಕೊಪ್ಪಳ 14: ನಗರದ ಜಿಲ್ಲಾ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ರವಿವಾರ ಫೀರ್ದೋಸ್ ಸಾಂಸ್ಕೃತಿಕ ಕ್ರೀಡಾ ಹಾಗೂ ತರಬೇತಿ ಸಂಸ್ಥೆ ವತಿಯಿಂದ ದಿವಂಗತ ಹಾಜಿ ವಹಿದುದ್ದೀನ್ ರವರ ಸ್ಮರಣೆಗಾಗಿ ಜರುಗಿದ ಶಿಕ್ಷಣದಲ್ಲಿ ನೈತಿಕ ಮೌಲ್ಯ ಎಂಬ ವಿಚಾರ ಸಂಕಿರಣ ಹಾಗೂ ಪ್ರಶಕ್ತ ಸಾಲಿನಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಶಸ್ತಿ ಪುರಸ್ಕೃತ ನಿವೃತ್ತ ವೃತ್ತಿ ಶಿಕ್ಷಕ ಅಮೀರ್ ಹಮ್ಜಾ ನದಾಫ್ ರವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು,
ಸದರಿಯವರು ತಮ್ಮ ವೃತ್ತಿ ಜೀವನದಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಶಿಕ್ಷಣ ನೀಡುವುದರ ಜೊತೆಗೆ ಅವರ ಪ್ರೀತಿ ವಿಶ್ವಾಸ ಹಾಗೂ ವಿದ್ಯಾರ್ಥಿಗಳ ಪಾಲಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ ದಲ್ಲದೆ ವಿವಿಧ ಕ್ಷೇತ್ರದಲ್ಲಿ ವಿವಿಧ ಜಿಲ್ಲಾ ,ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿರುವ ಈ ಶುಭ ಸಂದರ್ಭದಲ್ಲಿ ಅವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಶುಭ ಕೋರಲಾಯಿತು,
ಈ ಸಂದರ್ಭದಲ್ಲಿ ಕೊಪ್ಪಳದ ಹಿರಿಯ ವೈದ್ಯ ಡಾ, ಕೆ. ಜಿ ಕುಲಕರ್ಣಿ, ಅನ್ನಪೂರ್ಣೇಶ್ವರಿ ಆಸ್ಪತ್ರೆಯ ವೈದ್ಯರಾಧ ಡಾ, ಕಸ್ತೂರಿ ವೀರೇಶ್ ಕರಮುಡಿ, ಕನಕಗಿರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಡಾ, ಪರ್ವೀನ್ ಬೇಗಂ, ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಕಲೀಮುದ್ದೀನ್, ಹಿರಿಯ ಪತ್ರಕರ್ತ ಸಾಧಿಕ್ ಅಲಿ, ಯುವ ನಾಯಕ ಸಿರಾಜ್ ಲಾಟಿ, ಸೇರಿದಂತೆ ಕಾರ್ಯಕ್ರಮ ಸಂಘಟಕ ಎಂ.ಬದಿಯುದ್ದೀನ್ ಅಹಮದ್ ನವೀದ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು, ಅಮೀರ್ ಹಮ್ಜಾ ನದಾಫ್ ರವರಿಗೆ ಸನ್ಮಾನಿಸಿರುವುದಕ್ಕೆ ಅವರ ಅಭಿಮಾನಿ ಬಳಗ ಮತ್ತು ವಿದ್ಯಾರ್ಥಿ ಬಳಗ ತೀವ್ರ ಹರ್ಷ ವ್ಯಕ್ತಪಡಿಸಿ ಅವರನ್ನು ಮತ್ತು ಕಾರ್ಯಕ್ರಮ ಸಂಘಟಕರನ್ನು ಅಭಿನಂದಿಸಿದ್ದಾರೆ,
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 