ಬಡ್ತಿ ಮುಖ್ಯಗುರುಗಳಾಗಿ ಅಧಿಕಾರ ಸ್ವೀಕರಿಸಿದ ಸಿದ್ದಲಿಂಗಮ್ಮಗೆ ಸನ್ಮಾನ
Honored for Siddalingamma who took office as the promoted headmistress
ಬಳ್ಳಾರಿ 11: ನಗರದ ಮಹಾನಂದಿ ಕೊಟ್ಟಂನ ಡಾ. ಬಿ.ಆರ್. ಅಂಬೇಡ್ಕರ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಡ್ತಿ ಮುಖ್ಯಗುರುಗಳಾಗಿ ನೇಮಕಗೊಂಡ ಸಿದ್ದಲಿಂಗಮ್ಮ. ಎಲ್ ಅವರು ಸೋಮವಾರ ತಮ್ಮ ನೂತನ ಕರ್ತವ್ಯಕ್ಕೆ ಅಧಿಕೃತವಾಗಿ ಹಾಜರಾದರು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಶಿಕ್ಷಕರು, ಶಿಕ್ಷಣಾಭಿಮಾನಿಗಳು ಹಾಗೂ ಸ್ಥಳೀಯ ಮುಖಂಡರಿಂದ ಆತ್ಮೀಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಸಿದ್ದಲಿಂಗಮ್ಮ ಅವರಿಗೆ ಶಾಲಾ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಶಾಲು ಹೊದಿಸಿ ಗೌರವಿಸಿದರು. ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು ಹಾಗೂ ಸಾಮಾಜಿಕ ಮೌಲ್ಯಗಳ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ, “ಸಿದ್ದಲಿಂಗಮ್ಮ ಅವರು ಶಿಕ್ಷಕ ವೃತ್ತಿಯಲ್ಲಿ ಶ್ರಮ, ಪ್ರಾಮಾಣಿಕತೆ ಮತ್ತು ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಗುರುತಿಸಿಕೊಂಡಿದ್ದಾರೆ.
ಅವರ ಬಡ್ತಿ ಶಿಕ್ಷಕರ ಸಮುದಾಯಕ್ಕೆ ಸಂತಸದ ವಿಷಯವಾಗಿದೆ. ಅವರ ಆಡಳಿತದಲ್ಲಿ ಶಾಲೆ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ” ಎಂದು ಹೇಳಿದರು.ದಲಿತ ಹಿರಿಯ ಸಾಹಿತಿ ಎನ್.ಡಿ. ವೆಂಕಮ್ಮ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮರ್ಿತ ಮನೋಭಾವದ ಶಿಕ್ಷಕರು ಅಗತ್ಯವಾಗಿದ್ದು, ಸಿದ್ದಲಿಂಗಮ್ಮ ಅವರು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದು ಶ್ಲಾಘನೀಯ ಎಂದರು.ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ನಿಂಗಪ್ಪ , ಕುರುಗೋಡು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಿವಶಂಕರ, ಕೋಶಾಧ್ಯಕ್ಷರಾದ ಶೈಕ್ಷವಲಿ ಪಿ, ಕುರುಗೋಡು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಸ್ವಾಮಿ, ಎನ್.ಪಿ.ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದಪ್ಪ ಗೋನಾಳ್, ಪದಾಧಿಕಾರಿಗಳಾದ ಸುಧೀರ್, ಹುಲುಗಪ್ಪ, ಮಲ್ಲಣ್ಣ, ಪ್ರಮೀಳಾಬಾಯಿ ಎಂ., ಚೈತ್ರ, ಅನಿತಾ, ಲಕ್ಷ್ಮಣ ಎಸ್. ಭಂಡಾರಿ, ಷಣ್ಮುಖ,ಗೌರಮ್ಮ, ರುದ್ರಮ್ಮ ಸೇರಿದಂತೆ ಹಲವಾರು ಶಿಕ್ಷಕರು, ನಗರ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಶುಭಾಶಯ ಕೋರಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 