ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
Honoring accomplished students
ಲೋಕದರ್ಶನ ವರದಿ
ಧಾರವಾಡ 30: ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಮಾತನಾಡಿ. ಕಳೆದ ವರ್ಷ ಧಾರವಾಡ ಶಹರ ವಲಯವು ಶೇ. 65 ರಷ್ಟು ಫಲಿತಾಂಶ ಸಾಧಿಸಿ ಜಿಲ್ಲೆಯಲ್ಲಿ 6ನೇ ಸ್ಥಾನದಲ್ಲಿತ್ತು. ಈ ಬಾರಿ ಶೇ. 97 ರಷ್ಟು ಫಲಿತಾಂಶ ಸಾಧನೆ ಮಾಡಿ ಐತಿಹಾಸಿಕ ದಾಖಲೆಯ ಮೂಲಕ ಜಿಲ್ಲೆಯಲ್ಲಿ 4ನೇ ಸ್ಥಾನ ಪಡೆದಿದೆ. 74 ಪ್ರೌಢ ಶಾಲೆಗಳಲ್ಲಿ 36 ಪ್ರೌಢ ಶಾಲೆಗಳು ಶೇ. 100 ರಷ್ಟು ಫಲಿತಾಂಶ ಸಾಧಿಸಿದ್ದು ಶ್ಲಾಘನೀಯ. ಈ ಸಾಧನೆಗೆ ಕಾರಣಿಭೂತರಾದ ಸರ್ವ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಶೇಷ ಅಭಿನಂದನೆಗೆ ಅರ್ಹರೆಂದು ತಿಳಿಸಿದರು.
ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಾದ ಕು. ಪ್ರತೀಕ ಸರದಾರ (622) ಮಲ್ಲಸಜ್ಜನ ಪ್ರೌಢಶಾಲೆ, ಶಮಂತಿಕಾ ಅಗಡಿ (618) ಪ್ರಜಂಟೇಶನ್ ಪ್ರೌಢಶಾಲೆ, ಮಾನಸ ಕೋಲ್ಹಾರ(617) ಕೆ.ಇ ಬೋರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಅವನಿ (617) ಹಾಗೂ ಶ್ರೀನಿಧಿ ಹಿರೇಮಠ (617) ಜೆ.ಎಸ್.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾಗಿರಿ, ಧಾರವಾಡ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.
ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಕ್ಷೇತ್ರಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಾಯಧಿಕಾರಿ ಪ್ರವೀಣಕುಮಾರ ಗುಜ್ಜರ ಹಾಗೂ ತಾಲೂಕಾ ಎಸ್.ಎಸ್.ಎಲ್.ಸಿ ನೋಡಲ್ ಬಸವರಾಜ ಚಿಕ್ಕೂರ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸಮಾರಂಭದಲ್ಲಿ ಶಿಕ್ಷಕ ಸಂಘದ ಪ್ರತಿನಿಧಿಗಳಾದ ಎಮ್.ಜಿ.ಕೊಡ್ಲಿ, ಶಿವಾನಂದ ಖವಟಕೊಪ್ಪ, ಸಂಗಮೇಶ ಹಡಪದ, ಲಿಂಗರಾಜ ಅರ್ಕಸಾಲಿ, ಜಿ.ಎ.ಪೀರಣ್ಣವರ ಅವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 