ಪ್ರತಿಭೆಗಳನ್ನು ರೂಪಿಸುವ ಶಿಕ್ಷಕರನ್ನು ಗೌರವಿಸುವುದು ಶ್ರೇಷ್ಠ: ಡಾ. ಸಮೀರ ಹಾದಿಮನಿ

ಪ್ರತಿಭೆಗಳನ್ನು ರೂಪಿಸುವ ಶಿಕ್ಷಕರನ್ನು ಗೌರವಿಸುವುದು ಶ್ರೇಷ್ಠ: ಡಾ. ಸಮೀರ ಹಾದಿಮನಿ Honouring teachers who shape talent is noble: Dr. Sameera Hadimani

 

ಆಲಮೇಲ 05 : ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಕವಿವಾಣಿ ಸಾಹಿತ್ಯ ಪರಿಷತ್ತು, ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಾಹಿತಿ ಡಾ. ಸಮೀರ ಹಾದಿಮನಿ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ರೂಪಿಸುವ ಶಿಕ್ಷಕರನ್ನು ಗೌರವಿಸುತ್ತಿರುವ ಕವಿವಾಣಿ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.