ಬೆಳಗಾವಿಯ ನಡುಬೀದಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಭೀಕರ ಹತ್ಯೆ : ಬೆಚ್ಚಿಬಿದ್ದ ನಾಗರಿಕರು
ಬೆಳಗಾವಿ ; ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ತೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ನಾಗರಾಜ್ ಗಾಡಿವಡ್ಡರ್(26) (ರಾಮನಗರ) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.ಈತನನ್ನು ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಹತ್ಯೆಗೈಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃತ್ಯದಲ್ಲಿ ಮೂರು ಜನ ಭಾಗಿಯಾಗಿರುವ ಶಂಕೆ ಇದೆ. ಹತ್ಯೆ ಬಳಿಕ ಕಿಡಿಗೇಡಿಗಳು ಪರಾರಿಯಾಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಹತ್ಯೆಗೆ ಕಾರಣ ಎನೇಂದು ತಿಳಿದಿಲ್ಲ.
ಬೆಳಗಾವಿಯ ಶಿವಬಸವ ನಗರದಲ್ಲಿ ಬುಧವಾರ ರಾತ್ರಿ ಸುಮಾರು 9 ಗಂಟೆಯ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಇದರಿಂದ ನಾಗರಿಕರಲ್ಲಿ ಆತಂಕ ಮನೆ ಮಾಡಿದೆ. ಆದರೆ ಸುದ್ದಿ ತಿಳಿದು ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಸ್ಥಳಕ್ಕೆ ದೌಡಾಯಿದ್ದಾರೆ. ಅಲ್ಲದೆ ಹತ್ಯೆ ಮಾಡಿರುವ ಆರೋಪಿತರು ಹತ್ಯೆಯ ನಂತರ ಫರಾರಿಯಾಗಿದ್ದು, ಪೊಲೀಸರು ಕೊಲೆಗಾರರ ಶೋಧನೆ ಕಾರ್ಯ ಪ್ರಾರಂಭಿಸಿದ್ದಾರೆ.