ಹೊಸ ದಿಗಂತ : ವಿದ್ಯಾರ್ಥಿ ಪರಿಚಯಾತ್ಮಕ ಕಾರ್ಯಕ್ರಮಕ್ಕೆ ಚಾಲನೆ
Hosa Digantha: Student induction program launched
ಲೋಕದರ್ಶನ ವರದಿ
ಹುಲಕೋಟಿ 19 : ಪದವಿ ಶಿಕ್ಷಣವು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ವ್ಯಕ್ತಿತ್ವವನ್ನು ರೂಪಿಸುವ ಮಹತ್ವದ ಹಂತವಾಗಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಗಣಿತಶಾಸ್ತ್ರ ಪ್ರಾಧ್ಯಾಪಕಿ ಡಾ. ಸಾರಿಕಾ ಪಾಟೀಲ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯುಎಸಿ ಘಟಕ ಮತ್ತು ದೇಶಪಾಂಡೆ ಫೌಂಡೇಶನ್ ಸಹಯೋಗದಲ್ಲಿ 2026-27ನೆಯ ಸಾಲಿನಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೊಸ ದಿಗಂತ-2026: ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ’ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ಆರು ದಿನಗಳು ನಡೆಯುವ ಈ ಕಾರ್ಯಕ್ರಮದಲ್ಲಿ ತಾರ್ಕಿಕ ಚಿಂತನೆ ಮತ್ತು ಸಾಮರ್ಥ್ಯ, ಜೀವನ ಕೌಶಲ್ಯಗಳು, ಅಂಕೀಯ ಸಿದ್ಧತೆ, ಸ್ವಯಂ ಅರಿವು ಮತ್ತು ವೃತ್ತಿ ಯೋಜನೆ ಕುರಿತು ತರಬೇತಿ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.
ಹೊಸ ದಿಗಂತ ಕಾರ್ಯಕ್ರಮದ ಸಂಯೋಜಕ ಹುಸೇನಭಾಷಾ ಪ್ರಾಸ್ತಾವಿಕವಾಗಿ ಮಾತನಾಡುತ್ತ ಕಾರ್ಯಕ್ರಮದ ಉದ್ದೇಶ ಮತ್ತು ತರಬೇತಿಯ ರೂಪುರೇಷೆಗಳನ್ನು ವಿವರಿಸಿದರು. ಐಕ್ಯುಎಸಿ ಸಹಸಂಯೋಜಕ ಡಾ. ಮಂಜುನಾಥ ತ್ಯಾಲಗಡಿ ಅವರು ಹೊಸ ಪರಿಸರಕ್ಕೆ ಹೊಂದಿಕೊಳ್ಳಲು ಮತ್ತು ಅಗತ್ಯ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಇಂತಹ ತರಬೇತಿಗಳು ಸಹಕಾರಿಯಾಗಿವೆ ಎಂದರು. 1ನೆಯ ದಿನದ ಅಧಿವೇಶನದಲ್ಲಿ ಸಂಪನ್ಮೂಲ ವ್ಯಕ್ತಿ ಸಾವಿತ್ರಿ ಟಿ. ಅವರು ‘ಸಂವಹನ ಕೌಶಲ್ಯಗಳು’ ವಿಷಯದ ಕುರಿತು ತರಬೇತಿ ನೀಡುತ್ತ, ಉತ್ತಮವಾಗಿ ಮಾತನಾಡುವುದು, ಗಮನವಿಟ್ಟು ಆಲಿಸುವುದು, ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸುವುದು ಮತ್ತು ವೇದಿಕೆಯ ಭಯವನ್ನು ನಿವಾರಿಸಿಕೊಳ್ಳುವ ವಿಧಾನಗಳನ್ನು ಪ್ರಾಯೋಗಿಕ ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಬೋಧಕರು, ಪ್ರಥಮ ವರ್ಷದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಸಿ.ಎ. ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 