ವಿದ್ಯುತ್ ಅವಘಡದಿಂದ ಮನೆಗೆ ಬೆಂಕಿ: ಸಂತ್ರಸ್ತರಿಗೆ ಶಾಸಕ ಐಹೊಳೆ ಸಾಂತ್ವನನಷ್ಟ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಚಿಕ್ಕೋಡಿ 27: ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಶ್ರಾವಣ ಕೋಟೆ ಅವರ ಮನೆಗೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಹಿನ್ನೆಲೆಯಲ್ಲಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಹಾನಿಯ ವಿವರಗಳನ್ನು ಪರೀಶೀಲಿಸಿ ಆದಷ್ಟು ಬೇಗ ನಷ್ಟ ಪರಿಹಾರ ಒದಗಿಸುವ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದರು. ವಿದ್ಯುತ್ ಅವಘಡದಿಂದ ಮನೆಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವುದು ದುರದೃಷ್ಟಕರ.
ಸಂಕಷ್ಟದಲ್ಲಿರುವ ಕುಟುಂಬದ ಬೆಂಬಲಕ್ಕೆ ನಿಂತು, ಅವರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ದುರ್ಯೋಧನ ಐಹೊಳೆ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಎಂ.ಬಿ.ಆಲೂರೆ. ರಮೇಶ ಕಾಳನ್ನವರ ಮುಂತಾದವರು ಇದ್ದರು.